ಚೆನ್ನೈ:
ತಮಿಳು ಚಿತ್ರರಂಗದ ಪ್ರಸಿದ್ಧ ನಟ, ಮಾಜಿ ಸಂಸದ, ಎಐಎಡಿಎಂಕೆ ನಾಯಕ ಜೆ.ಕೆ.ರಿತೇಶ್ (46) ಅವರು ನಿನ್ನೆ ಹೃದಯಾಘಾತದಿಂದ ನಿಧಿರಾಗಿದ್ದಾರೆ.
ರಾಮನಾಥಪುರಂನಲ್ಲಿ ಎಐಎಡಿಎಂಕೆ ಮೈತ್ರಿ ಪಕ್ಷ ಬಿಜೆಪಿ ಅಭ್ಯರ್ಥಿ ಪರ ಪ್ರಚಾರದಲ್ಲಿ ಭಾಗವಹಿಸಿದ್ದರು. ಆಗ ಹೃದಯಾಘಾತವಾಗಿದ್ದು, ತಕ್ಷಣವೇ ಅವರನ್ನು ಸಮೀಪದ ಆಸ್ಪತ್ರೆಗೆ ದಾಖಲಿಸಿದರು ಆದರೆ ಚಿಕಿತ್ಸೆ ಫಲಕಾರಿಯಾಗದೇ ಮೃತಪಟ್ಟಿದ್ದಾರೆ ಎಂದು ವೈದ್ಯರು ತಿಳಿಸಿದ್ದಾರೆ.
ಡಿಎಂಕೆ ಮೂಲಕ ರಾಜಕೀಯ ಪ್ರವೇಶ ಮಾಡಿದ ರಿತೇಶ್. 2009ರ ಲೋಕಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದರು. ಆಗ ಅವರು ಜಲಸಂಪನ್ಮೂಲ ಸಮಿತಿಯ ಸದಸ್ಯರಾಗಿದ್ದರು. ಆದರೆ 2014ರ ಏಪ್ರಿಲ್‍ನಲ್ಲಿ ಡಿಎಂಕೆ ಬಿಟ್ಟು ಎಐಎಡಿಎಂಕೆಗೆ ಸೇರ್ಪಡೆಯಾಗಿದ್ದರು.
ಹಾಸ್ಯನಟ ಚಿನ್ನಿ ಜಯಂತ್ ನಿರ್ದೇಶನದ ‘ಕಾನಾಲ್ ನೀರ್’ ಸಿನಿಮಾದ ಮೂಲಕ ಜೆ.ಕೆ.ರಿತೇಶ್ ಅವರು 2007ರಲ್ಲಿ ಕಾಲಿವುಡ್ ಪ್ರವೇಶಿಸಿದ್ದರು. 2008ರಲ್ಲಿ ‘ನಾಯಗನ್’, 2010ರಲ್ಲಿ ‘ಪೆನ್ ಸಿಂಗಮ್’ ಸಿನಿಮಾಗಳಲ್ಲಿ ನಟಿಸಿದ್ದರು. ಕೊನೆಯದಾಗಿ ‘ಎಲ್‍ಕೆಜಿ’ ಚಿತ್ರಕ್ಕೆ ಬಣ್ಣ ಹಚ್ಚಿದ್ದರು ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
