ಗುಜರಾತ್
ದೇಶದಲ್ಲಿ ಲೋಕಸಭಾ ಚುನಾವಣೆಯ ಕಾವು ಹೆಚ್ಚಾದಂತೆ ರಾಜಕೀಯ ರಣಕಣ ದಿನೇದಿನೆ ರಂಗೇರತೊಡಗಿದ್ದು ರಾಜಕೀಯ ಪಕ್ಷಗಳು ಏನಾದರು ಮಾಡಿ ಈ ಚುನಾವಣೆ ಗೆಲ್ಲಲ್ಲೇ ಬೇಕು ಎಂದು ನಿರ್ಧರಿಸಿ ಆಗಿದೆ ಈ ಎಲ್ಲಾ ಬೆಳವಣಿಗೆಗಳ ನಡುವೆ ಭಾರತದ ತಂಡದ ಆಟಗಾರ ರವೀಂದ್ರ ಜಡೇಜಾ ಪತ್ನಿ ರಿವಾಬಾ ಜಡೇಜಾ ಬಿಜೆಪಿ ಪರ ಪ್ರಚಾರಕ್ಕೆ ಅಣಿಯಾಗುತ್ತಿದ್ದಾರೆ.
ಗುಜರಾತನ ಕಾರ್ಣಿ ಸೇನಾದ ಮಹಿಳಾ ಘಟಕದ ಮಹಿಳಾ ಘಟಕದ ಮುಖ್ಯಸ್ಥೆಯಾಗಿರುವ ರಿವಾಬಾ ಅವರು ಕಳೆದ ವಿಧಾನಸಭಾ ಚುನಾವಣೆ ಸಂದರ್ಭದಲ್ಲೇ ಸಕ್ರಿಯವಾಗಿ ರಾಜಕೀಯ ಕಣದಲ್ಲಿ ಕಾಣಿಸಿಕೊಂಡಿದ್ದರು. ಪ್ರಧಾನಿ ನರೇಂದ್ರ ಮೋದಿ ಅವರು ಇಂದು ಜಾಮ ನಗರದಲ್ಲಿ ನಡಡೆಯುವ ಸಮಾವೇಶದಲ್ಲಿ ಪಾಲ್ಗೊಳ್ಳಲಿದ್ದು, ರಿವಾಬಾ ಅವರು ಕೇಸರಿ ಬಾವುಟ ಹಿಡಿದು ಸ್ವಾಗತಿಸಲು ಸಜ್ಜಾಗಿದ್ದಾರೆ. ಲೋಕಸಭಾ ಚುನಾವಣೆಗೂ ಮುನ್ನ ಸೆಲೆಬ್ರಿಟಿಗಳಿಗೆ ಬಿಜೆಪಿ ಗಾಳ ಹಾಕುತ್ತಿದೆ.ಅನೇಕ ಮಾಜಿ ಕ್ರಿಕೆಟರ್ ಗಳನ್ನು ಪಕ್ಷಕ್ಕೆ ಸೇರಿಸಿಕೊಳ್ಳುತ್ತಿದೆ. ಕೆಲವರನ್ನು ಸ್ಟಾರ್ ಪ್ರಚಾರಕರನ್ನಾಗಿ ಬಳಸಲು ಯೋಜನೆ ಹಾಕಿಕೊಂಡಿದೆ ಎಂದು ತಿಳಿದು ಬಂದಿದೆ