
ದೇಶದ ಬಹುದೊಡ್ಡ ಸಾರ್ವಜನಿಕ ಸ್ವಾಮ್ಯದ ಬ್ಯಾಂಕ್ ಆದ ಎಸ್‌ಬಿಐ ರೆಪೊ ದರ ಆಧಾರಿತ ಸಾಲಗಳ ಮೇಲಿನ ಬಡ್ಡಿ ದರವನ್ನು 0.25 ಪರ್ಸೆಂಟ್‌ರಷ್ಟು ಇಳಿಸುವ ಮೂಲಕ ಗ್ರಾಹಕರಿಗೆ ಹೊಸ ವರ್ಷದ ಕೊಡುಗೆ ನೀಡಿದೆ.
ಎಸ್‌ಬಿಐ Benchmark based rate ಅನ್ನು 25 ಬೇಸಿಕ್ ಪಾಯಿಂಟ್‌ಗಳನ್ನು ಇಳಿಕೆ ಮಾಡಿದ್ದು, ಈಗಿರುವ 8.05ರಿಂದ 7.80 ಪರ್ಸೆಂಟ್ ಇಳಿಕೆಯಾಗಿದೆ. ಪರಿಷ್ಕೃತ ದರ ಜನವರಿ 1, 2020ರಿಂದ ಜಾರಿಗೆ ಬರಲಿದ್ದು, ಇದರಿಂದ ಗೃಹ ಸಾಲದ ಮೇಲಿನ ಬಡ್ಡಿ ದರ ಮತ್ತು ಸಣ್ಣ ಮತ್ತು ಮಧ್ಯಮ ಕೈಗಾರಿಕೆಗಳ (ಎಂಎಸ್ಎಂಇ) ಸಾಲಗಳ ಮೇಲಿನ ಬಡ್ಡಿ ದರಗಳು ಅಗ್ಗವಾಗಲಿವೆ ಎಂದು ಬ್ಯಾಂಕ್ ತಿಳಿಸಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
