ರಾಂಚಿ:
ಜಿ ಎಸ್ ಪಬ್ಲಿಕ್ ಶಾಲೆಯ ಶಿಕ್ಷಕ ಅದೇ ಶಾಲೆಯ ಹಾಸ್ಟೆಲ್ ನ ರೂಮಿನಲ್ಲಿ ನೇಣು ಹಾಕಿಕೊಂಡು ಆತ್ಮಹತ್ಯೆಗೆ ಶರಣಾದ ಘಟನೆ ಕೊಡ್ರಮಾ ಜಿಲ್ಲೆಯಲ್ಲಿ ನಡೆದಿದೆ .
ವಿಶಾಲ್ ಶರ್ಮಾ ಆತ್ಮಹತ್ಯೆಗೆ ಶರಣಾದ ಶಿಕ್ಷಕ ಎಂದು ತಿಳಿದು ಬಂದಿದೆ . ವಿಶಾಲ್ ಅವರು ಎರಡು ವರ್ಷಗಳಿಂದ ಈ ಶಾಲೆಯಲ್ಲಿ ಶಿಕ್ಷಕರಾಗಿ ಕೆಲಸ ಮಾಡುತ್ತಿದ್ದರು ಎಂದು ತಿಳಿದು ಬಂದಿದೆ ಪೊಲೀಸರು ತಿಳಿಸಿದ್ದು ಮುಂದಿನ ತನಿಖೆಗಾಗಿ ಪ್ರಕರಣ ದಾಖಲಿಸಿಕೊಂಡಿದ್ದೇವೆ ಎಂದು ತಿಳಿಸಿದ್ದಾರೆ . ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸ್ಥಳೀಯ ಸಾರ್ವಜನಿಕ ಆಸ್ಪತ್ರೆಗೆ ಕಳುಹಿಸಲಾಗಿದೆ ಎಂದು ತಿಳಿಸಿದ್ದಾರೆ.
ಇಂದು ಬೆಳಿಗ್ಗೆ ಎಂದಿನಂತೆ ನಡೆದ ಪ್ರಾರ್ಥನೆಗೆ ಶಿಕ್ಷಕ ವಿಶಾಲ್ ಬಂದಿರಲಿಲ್ಲ.ಇತ್ತ ಕೆಲ ಮಕ್ಕಳು ನಾವು ಹೋಗಿ ಶಿಕ್ಷಕರನ್ನು ಕರೆ ತರುವುದಾಗಿ ಹೇಲಿ ಅವರ ಕೋಣೆಯತ್ತ ತೆರಳಿದ್ದರು. ಬಾಗಿಲು ಹಾಕಿಕೊಂಡಿದ್ದರಿಂದ ಕಿಟಕಿಯಲ್ಲಿ ಇಣುಕಿ ನೋಡಿದಾಗ ವಿಶಾಲ್ ನೇಣು ಹಾಕಿಕೊಂಡ ಸ್ಥಿತಿಯಲ್ಲಿರುವುದನ್ನು ಕಂಡು ಮಕ್ಕಳು ಓಡಿ ಬಂದು ಶಾಲೆಯ ನಿರ್ದೇಶಕ ನಿತೇಶ್ ಕುಮಾರ್ ಅವರಿಗೆ ತಿಳಿಸಿದ್ದಾರೆ ಎನ್ನಲಾಗಿದೆ.
ಈ ಕಾರಣದಿಂದ ಇಂದು ಶಾಲೆಗೆ ರಜೆ ನೀಡಲಾಗಿದ್ದು, ಪೊಲೀಸರು ಸ್ಥಳ ಪರಿಶೀಲನೆ ನಡೆಸುತ್ತಿದ್ದಾರೆ. ವಿಶಾಲ್ ಮೂಲತಃ ಲೆದಾ ಬರ್ಕಟ್ಟಾ ನಿವಾಸಿಯಾಗಿದ್ದು, ಆತನ ಕುಟುಂಬಸ್ಥರಿಗೆ ವಿಷಯ ತಿಳಿಸಲಾಗಿದೆ. ಸೋಮವಾರ ರಾತ್ರಿ 9 ಗಂಟೆಯವರೆಗೂ ವಿಶಾಲ್ ನಮ್ಮೊಂದಿಗೆ ಕೆಲಸ ಮಾಡಿದ್ದಾರೆ.
ಸರಸ್ವತಿ ಪೂಜೆಗೆ ಯಾರನ್ನು ಆಹ್ವಾನಿಸಬೇಕು ಎಂಬುದರ ಕುರಿತಾಗಿ ನಮ್ಮ ಜೊತೆ ಚರ್ಚೆ ನಡೆಸಿದ್ದರು. ತಾವೇ ಎಲ್ಲ ಆಹ್ವಾನ ಪತ್ರಿಕೆಗಳ ಮೇಲೆ ಅತಿಥಿಗಳ ಹೆಸರು ಬರೆದು ತಮ್ಮ ಕೋಣೆಯತ್ತ ಹೋಗಿದ್ದರು. ಬೆಳಗ್ಗೆ ನೇಣು ಬಿಗಿದ ಸ್ಥಿತಿಯಲ್ಲಿ ವಿಶಾಲ್ ಶವ ಪತ್ತೆಯಾಗಿದೆ. ಆತ್ಮಹತ್ಯೆಗೆ ಕಾರಣ ಇನ್ನೂ ತಿಳಿದು ಬಂದಿಲ್ಲ ಎಂದು ನಿತೇಶ್ ಪೊಲೀಸರಿಗೆ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








