ನವದೆಹಲಿ:
ಕೊರೋನಾ ವೈರಸ್ ನಿಂದ ದೆಹಲಿ ಸಂಪೂರ್ಣವಾಗಿ ಸುರಕ್ಷಿತವಾಗಿದೆ ಎನಿಸುವವರೆಗೂ ಶಾಲೆಗಳನ್ನು ತೆರೆಯುವ ಪ್ರಶ್ನೆಯೇ ಇಲ್ಲ ಎಂದು ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್ ಅವರು ಶನಿವಾರ ಹೇಳಿದ್ದಾರೆ.
ಸ್ವಾತಂತ್ರ್ಯ ದಿನಾಚರಣೆ ಹಿನ್ನೆಲೆಯಲ್ಲಿ ದೆಹಲಿ ಜನತೆಯನ್ನುದ್ದೇಶಿಸಿ ಮಾತನಾಡಿರುವ ಅವರು. ಎರಡು ತಿಂಗಳಿಗೆ ಹೋಲಿಕೆ ಮಾಡಿದರೆ ದೆಹಲಿಯಲ್ಲಿ ಇದೀಗ ಪರಿಸ್ಥಿತಿ ಸುಧಾರಿಸಿದೆ. ಇದರ ಯಶಸ್ಸು ಎಲ್ಲಾ ಕೊರೋನಾ ವಾರಿಯರ್ಸ್’ಗಳು ಹಾಗೂ ಸಂಘಟನೆಗಳಿಗೆ ಸಲ್ಲಬೇಕು ಎಂದು ಹೇಳಿದ್ದಾರೆ. ಆಮ್ ಆದ್ಮಿ ಸರ್ಕಾರಕ್ಕೆ ಶಾಲಾ ವಿದ್ಯಾರ್ಥಿಗಳ ಸುರಕ್ಷತೆ ಮತ್ತು ಆರೋಗ್ಯ ಹೆಚ್ಚು ಮುಖ್ಯ. ಸದ್ಯಕ್ಕೆ ಶಾಲೆಗಳನ್ನು ಪುನರಾರಂಭಿಸುವುದು ಬೇಡ ಎಂಬುದು ಬಹುತೇಕ ಪೋಷಕರ ಸಲಹೆಯಾಗಿದೆ. ಮಕ್ಕಳ ಆರೋಗ್ಯ ರಕ್ಷಣೆಗೆ ಹೆಚ್ಚಿನ ಆದ್ಯತೆ ನೀಡಲಾಗುವುದು ಎಂದು ಭರವಸೆ ನೀಡಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ