ಜಮ್ಮು-ಕಾಶ್ಮಿರ : ನಾಳೆಯಿಂದ ಶಾಲಾ-ಕಾಲೇಜುಗಳು ಪುನರಾರಂಭ

ಜಮ್ಮು

      ಜಮ್ಮುವಿನಲ್ಲಿ ಸಿಆರ್‌ಪಿಸಿ ಸೆಕ್ಷನ್ 144 ರ ಅಡಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಜಿಲ್ಲಾಡಳಿತ ಶುಕ್ರವಾರ ತೆರವುಗೊಳಿಸಿರುವ ಹಿನ್ನೆಲೆಯಲ್ಲಿ ಶನಿವಾರದಿಂದ ಎಲ್ಲಾ ಶಿಕ್ಷಣ ಸಂಸ್ಥೆಗಳನ್ನು ತೆರೆಯಲು ಆದೇಶಿಸಲಾಗಿದೆ.ಸೆಕ್ಷನ್ 144 ರ ಅಡಿ ವಿಧಿಸಲಾಗಿದ್ದ ನಿರ್ಬಂಧಗಳನ್ನು ಹಿಂಪಡೆಯಲಾಗಿದೆ.

      ಎಲ್ಲಾ ಶಾಲಾ-ಕಾಲೇಜುಗಳು ಮತ್ತು ಇತರ ಶಿಕ್ಷಣ ಸಂಸ್ಥೆಗಳು ಆಗಸ್ಟ್ 10 ರಿಂದ (ಶನಿವಾರ) ಸಾಮಾನ್ಯ ರೀತಿಯಲ್ಲಿ ಕಾರ್ಯನಿರ್ವಹಿಸಲಿವೆ ಎಂದು ಜಮ್ಮು ಜಿಲ್ಲಾಧಿಕಾರಿ ಹೊರಡಿಸಿರುವ ಆದೇಶ ತಿಳಿಸಿದೆ. ಈ ಮಧ್ಯೆ, ಪ್ರವೇಶ, ತರಗತಿ ಮತ್ತು ಪರೀಕ್ಷೆಗಳ ವೇಳಾಪಟ್ಟಿಯನ್ನು ಪ್ರತ್ಯೇಕವಾಗಿ ತಿಳಿಸಲಾಗುವುದು ಎಂದು ಜಮ್ಮು ವಿಶ್ವವಿದ್ಯಾಲಯದ ವಕ್ತಾರರು ತಿಳಿಸಿದ್ದಾರೆ.

    ಜಮ್ಮು ಮತ್ತು ಕಾಶ್ಮೀರಕ್ಕೆ ವಿಶೇಷ ಸ್ಥಾನಮಾನ ನೀಡುವ ಸಂವಿಧಾನದ 370 ನೇ ವಿಧಿ ರದ್ದು ಹಾಗೂ ರಾಜ್ಯವನ್ನು ಎರಡು ಕೇಂದ್ರಾಡಳಿತ ಪ್ರದೇಶಗಳಾಗಿ ವಿಭಜಿಸಿದ ನಂತರ ಆಗಸ್ಟ್ 5 ರಂದು ಜಮ್ಮು ಜಿಲ್ಲೆಯಲ್ಲಿ ಸೆಕ್ಷನ್ 144 ಅನ್ನು ವಿಧಿಸಲಾಗಿತ್ತು. ಸಾಂಬಾ, ಕಥುವಾ, ಉಧಂಪುರ್ ಮತ್ತು ರಾಸಿಯಲ್ಲೂ ಶಾಲೆಗಳು ತೆರೆಯಲಿವೆ ಎಂದು ವರದಿಗಳು ತಿಳಿಸಿವೆ. ನಿರ್ಬಂಧಗಳನ್ನು ತೆಗೆದು ಹಾಕುತ್ತಿದ್ದಂತೆ ವಾಣಿಜ್ಯ ವಾಹನಗಳು ರಸ್ತೆಗಳಿಗೆ ಇಳಿದಿವೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link