ನವದೆಹಲಿ:
ಜಮ್ಮು ಮತ್ತು ಕಾಶ್ಮೀರಕ್ಕೆ ನೀಡಿದ್ದ ವಿಶೇಷ ಸ್ಥಾನಮಾನವನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ನಿರ್ಧಾರ ಸಂಬಂಧ ಇಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಸಲಾಗುವುದು ಎಂದು ವಿಶ್ವ ಸಂಸ್ಥೆ ತಿಳಿಸಿದೆ .
ಈ ವಿಚಾರ ತುಂಬಾ ಸೂಕ್ಷ್ಮವಾಗಿದ್ದು ಆ ಕಾರಣದಿಂದಾಗಿ ವಿಚಾರದ ಕುರಿತಾಗಿ ಇಂದು ಗೌಪ್ಯವಾಗಿ ಚರ್ಚಿಸಲಾಗುವುದು ಎಂದು ವಿಶ್ವಸಂಸ್ಥೆಯ ಭದ್ರತಾ ಮಂಡಳಿ ಅಧ್ಯಕ್ಷರು ಹೇಳಿದ್ದಾರೆ. ಕಾಶ್ಮೀರ ವಿಚಾರಕ್ಕೆ ಸಂಬಂಧಿಸಿದಂತೆ ತುರ್ತು ಸಭೆ ಕರೆಯುವಂತೆ ವಿಶ್ವಸಂಸ್ಥೆ ಭದ್ರತಾ ಮಂಡಳಿಯ ಅಧ್ಯಕ್ಷರಿಗೆ ಪತ್ರ ಬರೆದಿರುವುದಾಗಿ ಪಾಕಿಸ್ತಾನ ವಿದೇಶಾಂಗ ಸಚಿವ ಶಾ ಮೆಹಮೂದ್ ಖುರೇಶಿ ಅವರು ಹೇಳಿದ್ದಾರೆ. ಈ ಬೆನ್ನಲ್ಲೇ ವಿಶ್ವಸಂಸ್ಥೆಯ ಭದ್ರತಾ ಮಂಡಳಿಯಲ್ಲಿ ರಹಸ್ಯ ಸಭೆ ನಡೆಸಲಾಗುತ್ತಿದೆ .ಮತ್ತು ಪಾಕಿಸ್ಥಾನದ ಈ ಬೇಡಿಕೆಗೆ ಚೀನಾ ಕೂಡ ಬೆನ್ನೆಲುಬಾಗಿರುವುದು ಪಾಕಿಸ್ತಾನಕ್ಕೆ ಆನೆ ಬಲ ಬಂದಂತಾಗಿದೆ.
. ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








