ತಿರುಪತಿ:
ತೆಲಂಗಾಣ ಮತ್ತು ಆಂಧ್ರದಲ್ಲಿ ಮಹಿಳೆಯರು, ಯುವತಿಯರು ಮತ್ತು ಹುಡುಗಿಯರ ಮೇಲೆ ಆಗುವ ಲೈಂಗಿಕ ದೌರ್ಜನ್ಯ ನಿಲ್ಲುವ ಮುನ್ಸೂಚನೆ ಕಾಣುತ್ತಿಲ್ಲ.ದಿಶಾ ಪ್ರಕರಣ ಮಾಸುವ ಮುನ್ನವೇ ಚಿತ್ತೂರು ಜಿಲ್ಲೆಯಲ್ಲಿ ನಡೆದಿರುವ ಘಟನೆ ಎಲ್ಲರನ್ನು ಭಯಭೀತರನ್ನಾಗಿಸಿದೆ .
ಇಬ್ಬರು ಬಾಲಕರು ಲಿಫ್ಟ್ ಕೊಡುವ ನೆಪದಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ. ತಿರುಪತಿ ಬಳಿಯ ಮುಲ್ಲಪುಡುಪುಡಿಯಲ್ಲಿ ಈ ಘಟನೆ ನಡೆದಿದೆ. ಆರೋಪಿ ರಾಜಮೋಹನ್ ಮತ್ತು ವೆಂಕಟೇಶ್ ಅವರನ್ನು ಪೊಲೀಸರು ಬಂಧಿಸಿದ್ದಾರೆ. ಪ್ರಕರಣ ದಾಖಲಿಸಿಕೊಂಡು ತನಿಖೆ ಮುಂದುವರಿಸಿದ್ದಾರೆ ಎಂದು ತಿಳಿದು ಬಂದಿದೆ.ಇನ್ನೊಂದೆಡೆ ಮಹಿಳೆಯರನ್ನು ಅಮಾನುಶವಾಗಿ ನಡೆಸಿಕೊಳ್ಳುವವರಿಗೆ ಶಿಕ್ಷೆಯಾಗಬೇಕು ಎಂದು ಪ್ರತಿಭಟನೆಗಳು ತೀವ್ರ ಸ್ವರೂಪದಲ್ಲಿದ್ದರೆ ,ಇತ್ತ ಕಾಮುಕರು ತಮ್ಮ ಅಟ್ಟಹಾಸ ಮುಂದುವರೆಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ