ಹೊಸದಿಲ್ಲಿ:
ಚುನಾವಣೆ ನಂತರ ಎಲ್ಲೂ ಒಂದು ಹೇಳಿಕೆಯನ್ನಾಗಲಿ ಅಥವಾ ಬಹಿರಂಗವಾಗಿ ಕಾಣಿಸುವುದಾಗಲಿ ಮಾಡದ ಸಿಧು ಇಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ವಾದ್ರಾ ಅವರನ್ನು ಭೇಟಿ ಮಾಡಿ ಮಾತುಕತೆ ನಡೆಸಿದ್ದಾರೆ.
ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದು, ಮರಳಿ ರಾಜ್ಯ ರಾಜಕಾರಣದಲ್ಲಿ ತೊಡಗಿಸಿಕೊಳ್ಳುವ ನಿರೀಕ್ಷೆ ಇದೆ. ಪಂಜಾಬ್ ಮುಖ್ಯಮಂತ್ರಿ ಕ್ಯಾಪ್ಟನ್ ಅಮರಿಂದರ್ ಸಿಂಗ್ ಜತೆೆ ಭಿನ್ನಾಭಿಪ್ರಾಯ ಹೊಂದಿರುವ ಸಿಧು ಕಾಂಗ್ರೆಸ್ ವರಿಷ್ಠರ ಜತೆಗೂ ಅಂತರ ಕಾಯ್ದಕೊಂಡಿದ್ದರು.
ದಿಲ್ಲಿ ವಿಧಾನಸಭೆ ಚುನಾವಣೆಗೆ ಅವರನ್ನು ಸ್ಟಾರ್ ಕ್ಯಾಂಪೇನರ್ ಆಗಿ ಆಯ್ಕೆ ಮಾಡಿದ್ದರೂ ಅವರು ಎಲ್ಲೂ ಕಾಣಿಸಿಕೊಂಡಿರಲಿಲ್ಲ. ಈ ಹಿನ್ನೆಲೆಯಲ್ಲಿ ಅವರನ್ನು ದಿಲ್ಲಿಗೆ ಕರೆಸಿಕೊಂಡು ಮಾತುಕತೆ ನಡೆಸಲಾಗಿದೆ ಎನ್ನಲಾಗಿದೆ. ಈ ಕುರಿತು ಪ್ರತಿಕ್ರಿಯಿಸಿರುವ ಸಿಧು, ದಿಲ್ಲಿಯಲ್ಲಿ ಪ್ರಿಯಾಂಕಾ ಜತೆೆ 40 ನಿಮಿಷ ಹಾಗೂ ಸೋನಿಯಾ ಜತೆೆ ಒಂದು ಗಂಟೆಗೂ ಅಧಿಕ ಕಾಲ ಚರ್ಚೆ ನಡೆಸಿದ್ದು, ‘ಎಲ್ಲವನ್ನೂ ತಾಳ್ಮೆಯಿಂದ ಆಲಿಸಿದ್ದೇನೆ’ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ