ನವದೆಹಲಿ
ಕೆಲ ದಿನಗಳಿಂದ ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರವನ್ನು ಹತೋಟಿಗೆ ತರುವಲ್ಲಿ ಕೇಂದ್ರ ಗೃಹಸಚಿವರಾದ ಅಮಿತ್ ಶಾ ಸೋತಿದ್ದಾರೆ,ಆದ್ದರಿಂದ ಅವರೇ ಈ ದುರಂತದ ನೈತಿಕ ಹೊಣೆ ಹೊತ್ತು ರಾಜೀನಾಮೆ ನೀಡಬೇಕು ಎಂದು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾಗಾಂಧಿ ಒತ್ತಾಯಿಸಿದ್ದಾರೆ.
ದೆಹಲಿ ಹಿಂಸಾಚಾರದ ಹೊಣೆಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ತಮ್ಮ ಸ್ಥಾನಕ್ಕೆ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ. ದೆಹಲಿ ಹಿಂಸಾಚಾರವನ್ನು ಯೋಜಿತ ಪಿತೂರಿ ಎಂದು ಕರೆದಿರುವ ಸೋನಿಯಾ ಗಾಂಧಿ, ಕಳೆದ 72 ಗಂಟೆಗಳಲ್ಲಿ ದೆಹಲಿ ಪೊಲೀಸರು ಪಾರ್ಶ್ವವಾಯುವಿಗೆ ಒಳಗಾಗಿದ್ದಾರೆ ಎಂದು ಕಿಡಿಕಾರಿದ್ದಾರೆ.
ಪೌರತ್ವ ತಿದ್ದುಪಡಿ ಕಾಯ್ದೆಯ ಪರ ಹಾಗೂ ವಿರೋಧಿ ಪ್ರತಿಭಟನಾಕಾರರ ನಡುವೆ ದೆಹಲಿಯಲ್ಲಿ ಭುಗಿಲೆದ್ದ ಘರ್ಷಣೆ ಹಿಂಸಾಚಾರದ ಸ್ವರೂಪವನ್ನು ಪಡೆದುಕೊಂಡಿದ್ದು ಇದುವರೆಗೂ 20 ಜನರು ಸಾವನ್ನಪ್ಪಿದ್ದಾರೆ. ಗಲಬೆಯಲ್ಲಿ 150 ಕ್ಕೂ ಅಧಿಕ ಮಂದಿ ಗಾಯಗೊಂಡಿದ್ದಾರೆ.
ಗಲಭೆಯಲ್ಲಿ ಮೃತಪಟ್ಟವರ ಕುಟುಂಬದ ಸದಸ್ಯರಿಗೆ ಸಾಂತ್ವಾನ ಹೇಳಿದ ಸೋನಿಯಾ ಗಾಂಧಿ, ಇಷ್ಟೆಲ್ಲಾ ನಡೆಯುತ್ತಿದ್ದರೂ ಕೇಂದ್ರ ಗೃಹ ಸಚಿವರು ಎಲ್ಲಿದ್ದರು ಎಂದು ಪ್ರಶ್ನಿಸಿದ್ದಾರೆ. ಗಲಭೆ ಪೀಡಿತ ಪ್ರದೇಶಗಳಲ್ಲಿ ಹೆಚ್ಚಿನ ಪೊಲೀಸರನ್ನು ನಿಯೋಜನೆ ಮಾಡಬೇಕು ಎಂದು ಒತ್ತಾಯಿಸಿದ ಅವರು ಗ್ರಾಮಗಳಲ್ಲಿ ಶಾಂತಿ ಸಮಿತಿಯನ್ನು ರಚನೆ ಮಾಡುವಂತೆ ಆಗ್ರಹಿಸಿದ್ದಾರೆ.ಆದರೆ, ಈ ಗಲಭೆಗೆ ಕೇಂದ್ರ ಸರ್ಕಾರದ ನಿಷ್ಕ್ರಿಯತೆಯೇ ಕಾರಣ. ಹೀಗಾಗಿ ಮೊದಲು ಕೇಂದ್ರ ಸರ್ಕಾರ ಈ ಹಿಂಸಾಚಾರವನ್ನು ಅರಿತುಕೊಳ್ಳಬೇಕು ಮತ್ತು ಇದರ ನೈತಿಕ ಹೊಣೆ ಹೊತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಕೂಡಲೇ ತಮ್ಮ ಸ್ಥಾನಕ್ಕೆ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
