ನವದೆಹಲಿ
ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಸಚಿವ ಹಾಗೂ ಕಾಂಗ್ರೆಸ್ ಮುಖಂಡ ಡಿ.ಕೆ. ಶಿವಕುಮಾರ್ ಅವರನ್ನು ಕಾಂಗ್ರೆಸ್ ವರಿಷ್ಠೆ ಸೋನಿಯಾಗಾಂಧಿ ಅವರು ನಾಳೆ ಭೇಟಿ ಮಾಡುವ ಸಾಧ್ಯತೆಗಳಿವೆ. ನಾಳೆ ತಿಹಾರ್ ಜೈಲಿಗೆ ಭೇಟಿ ನೀಡಲಿರುವ ಸೋನಿಯಾಗಾಂಧಿ ಅವರು ಡಿ.ಕೆ. ಶಿವಕುಮಾರ್ ಅವರ ಆರೋಗ್ಯದ ಬಗ್ಗೆ ವಿಚಾರಿಸಿ ಸಾಂತ್ವನ ಹೇಳಲಿದ್ದಾರೆ.
ಇದೇ ವೇಳೆ ಇಡಿ ದಾಖಲಿಸಿಕೊಂಡಿರುವ ಪ್ರಕರಣ ಕುರಿತಂತೆಯೂ ಮಾತುಕತೆ ನಡೆಸಿದ್ದರು. ಈ ಹಿಂದೆ ಐಎನ್‍ಎಕ್ಸ್ ಮೀಡಿಯಾ ಹಗರಣದಲ್ಲಿ ತಿಹಾರ್ ಜೈಲು ಸೇರಿರುವ ಕೇಂದ್ರದ ಮಾಜಿ ಸಚಿವ ಚಿದಂಬರಂ ಅವರನ್ನು ಸೋನಿಯಾಗಾಂಧಿ ಅವರು ತಿಹಾರ್ ಜೈಲಿನಲ್ಲೇ ಭೇಟಿ ಮಾಡಿದ್ದರು.ಮಾಜಿ ಸಚಿವ ಡಿ.ಕೆ ಶಿವಕುಮಾರ್ ಅವರ ಭೇಟಿಗೂ ಸೋನಿಯಾ ಮನವಿ ಮಾಡಿದ್ದರು. ಆದರೆ, ಕಾರಾಗೃಹ ಅಧಿಕಾರಿಗಳು ಶಿವಕುಮಾರ್ ಭೇಟಿಗೆ ಅವಕಾಶ ಮಾಡಿಕೊಟ್ಟಿರಲಿಲ್ಲ. ನಾಳೆ ಸೋನಿಯಾಗಾಂಧಿ ಅವರು ತಿಹಾರ್ ಜೈಲಿಗೆ ಭೇಟಿ ನೀಡಿ ಡಿ.ಕೆ ಶಿವಕುಮಾರ್ ಅವರನ್ನು ಭೇಟಿ ಮಾಡಲು ಕಾರಾಗೃಹದ ಅಧಿಕಾರಿಗಳ ಸಮ್ಮತಿಯನ್ನು ಪಡೆದುಕೊಂಡಿದ್ದಾರೆ ಎನ್ನಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ