ಹೈದರಾಬಾದ್
ಏಪ್ರಿಲ್ 7ರ ನಂತರ ತೆಲಂಗಾಣದಲ್ಲಿ ಯಾವುದೇ ಕೊರೊನಾ ಪ್ರಕರಣ ಉಳಿಯದ ಹಾಗೆ ಕ್ರಮ ಕೈಗೊಳ್ಳಲಾಗುವುದು ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ತಿಳಿಸಿದ್ದಾರೆ. ತೆಲಂಗಾಣದಲ್ಲಿ ಕೊರೊನಾ ಸೋಂಕಿಗೆ ಕಡಿವಾಣ ಹಾಕಲು ಎಲ್ಲಾ ಪ್ರಯತ್ನ ಮಾಡಿದ್ದು , ಇಂದು 11 ಪಾಸಿಟಿವ್ ರೋಗಿಗಳು ಡಿಸ್ಚಾರ್ಜ್ ಆಗುತ್ತಿದ್ದಾರೆ. ಚಿಕಿತ್ಸೆಯ ನಂತರ ಇವರಿಗೆ ನೆಗೆಟಿವ್ ಎಂದು ವರದಿ ಬಂದಿದೆ. ಹಾಗಾಗಿ ಇವರುಗಳನ್ನು ಇಂದು ಡಿಸ್ಚಾರ್ಜ್ ಮಾಡಲಾಗುತ್ತಿದೆ. ಆಸ್ಪತ್ರೆಯಿಂದ ಹೊರ ಹೋದ ಬಳಿಕ ಮತ್ತೆ 14 ದಿನಗಳ ಕಾಲ ಹೋಮ್ ಕ್ವಾರಂಟೈನ್ ನಲ್ಲ ಇರಲು ಸೂಚನೆ ನೀಡಲಾಗಿದೆ.
ತೆಲಂಗಾಣದಲ್ಲಿ 70 ಕೊರೊನಾ ಪಾಸಿಟಿವ್ ಪ್ರಕರಣಗಳು ದೃಢವಾಗಿದ್ದವು. ಒಬ್ಬ ರೋಗಿಯನ್ನು ಈ ಹಿಂದೆ ಡಿಸ್ಚಾರ್ಜ್ ಮಾಡಲಾಗಿತ್ತು. ಸದ್ಯ ಇಂದು 11 ರೋಗಿಗಳು ಡಿಸ್ಚಾರ್ಜ್ ಆಗಲಿದ್ದು, 58 ರೋಗಿಗಳು ಬಾಕಿ ಉಳಿದಿದ್ದಾರೆ ತೆಲಂಗಾಣದ ಕೊರೊನಾ ಪ್ರಕರಣಗಳ ಬಗ್ಗೆ ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ವಿವರ ನೀಡಿದ್ದಾರೆ.
”ಇಂದು 11 ಕೊರೊನಾ ರೋಗಿಗಳು ಡಿಸ್ಚಾರ್ಜ್ ಆಗಲಿದ್ದಾರೆ. ಬೇರೆ ಬೇರೆ ದೇಶಗಳಿಂದ ತೆಲಂಗಾಣಕ್ಕೆ ಬಂದ 25,937 ಜನರು ಸರ್ಕಾರದ ನಿಗಾದಲ್ಲಿದ್ದಾರೆ. ಈ ಜನರ ಕ್ವಾರಂಟೈನ್ ಏಪ್ರಿಲ್ 7 ರಂದು ಪೂರ್ಣಗೊಳ್ಳಲಿದೆ.” ಎಂದು ಮುಖ್ಯಮಂತ್ರಿ ಕೆ ಚಂದ್ರಶೇಖರ್ ರಾವ್ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ