ಕುಡಿದು ವಾಹನ ಚಲಾಯಿಸುವುದರಿಂದ ಉಂಟಾಗುವ ರಸ್ತೆ ಅಪಘಾತ ತಡೆಯಲು ಕ್ರಮ: ಗಡ್ಕರಿ

ನವದೆಹಲಿ

      ಕುಡಿದು ವಾಹನ ಚಲಾಯಿಸುವುದರಿಂದ ಉಂಟಾಗುವ ರಸ್ತೆ ಅಪಘಾತಗಳ ಸಂಖ್ಯೆಯನ್ನು ತಡೆಯಲು ಸರ್ಕಾರವು ವಿವಿಧ ಕ್ರಮಗಳನ್ನು ಪ್ರಾರಂಭಿಸಿದೆ. 1988ರ ಮೋಟಾರು ವಾಹನ ಕಾಯ್ದೆಯ ಸೆಕ್ಷನ್ 185ರ ಅನ್ವಯ ಜೈಲು ಶಿಕ್ಷೆ ಅಥವಾ ದಂಡ ಅಥವಾ ಎರಡನ್ನೂ ವಿಧಿಸಲಾಗುತ್ತದೆ ಎಂದು ಕೇಂದ್ರ ರಸ್ತೆ, ಸಾರಿಗೆ ಮತ್ತು ಹೆದ್ದಾರಿ ಸಚಿವ ನಿತಿನ್ ಗಡ್ಕರಿ ಗುರುವಾರ ಲೋಕಸಭೆಗೆ ತಿಳಿಸಿದ್ದಾರೆ.

      ಲಿಖಿತ ಉತ್ತರದಲ್ಲಿ ಗಡ್ಕರಿ ಅವರು, 1988ರ ಮೋಟಾರು ವಾಹನ ಕಾಯ್ದೆಯ ವಿವಿಧ ನಿಬಂಧನೆಗಳನ್ನು ಜಾರಿಗೊಳಿಸುವುದು ರಾಜ್ಯ ಸರ್ಕಾರಗಳ ಜವಾಬ್ದಾರಿಯಾಗಿದೆ. ಈ ಸಂಬಂಧ ಸಚಿವಾಲಯವು ಎಲ್ಲಾ ರಾಜ್ಯಗಳಿಗೆ ಸೂಚನೆ ನೀಡಿದೆ ಎಂದು ತಿಳಿಸಿದ್ದಾರೆ.

      ರಾಷ್ಟ್ರೀಯ ಹೆದ್ದಾರಿಗಳ ಉದ್ದಕ್ಕೂ ಮದ್ಯ ಮಾರಾಟಗಾರರಿಗೆ ಯಾವುದೇ ಪರವಾನಗಿ ನೀಡದಂತೆ ನೋಡಿಕೊಳ್ಳಬೇಕೆಂದು ಎಲ್ಲಾ ರಾಜ್ಯ ಸರ್ಕಾರಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಿಗೆ ಮನವಿ ಮಾಡಲಾಗಿತ್ತು. ರಾಷ್ಟ್ರೀಯ ಹೆದ್ದಾರಿಗಳಲ್ಲಿ ಮದ್ಯ ಮಾರಾಟಗಾರರಿಗೆ ಈಗಾಗಲೇ ಪರವಾನಗಿ ನೀಡಲಾಗಿದ್ದರೆ, ಅದನ್ನು ಸರಿಪಡಿಸುವ ಕ್ರಮ ತೆಗೆದುಕೊಳ್ಳಬೇಕು ಎಂದು ಸೂಚಿಸಲಾಗಿದೆ ಎಂದು ಅವರು ಹೇಳಿದ್ದಾರೆ.

      ಮದ್ಯಪಾನ ಚಾಲನೆಯ ಅಪಾಯಗಳ ಬಗ್ಗೆ ರಸ್ತೆ ಬಳಕೆದಾರರಿಗೆ ಜಾಗೃತಿ ಮೂಡಿಸಲು ಸಚಿವಾಲಯವು ಮುದ್ರಣ ಮತ್ತು ಎಲೆಕ್ಟ್ರಾನಿಕ್ ಮಾಧ್ಯಮದ ಮೂಲಕ ಅಭಿಯಾನಗಳನ್ನು ಕೈಗೊಳ್ಳುತ್ತದೆ ಮತ್ತು ಕುಡಿತ ಪರಿಶೀಲನೆ ಸಾಧನ ಖರೀದಿಗಾಗಿ ರಾಜ್ಯಗಳಿಗೆ ಆರ್ಥಿಕ ನೆರವು ನೀಡಲಾಗುತ್ತಿದೆ ಎಂದು ಗಡ್ಕರಿ ತಿಳಿಸಿದ್ದಾರೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ

 

Recent Articles

spot_img

Related Stories

Share via
Copy link