ನವದೆಹಲಿ
ವಾಹನ ಕ್ಷೇತ್ರದ ಕುಸಿತವನ್ನು ಗಮನದಲ್ಲಿಟ್ಟುಕೊಂಡು ಅದನ್ನು ತಪ್ಪಿಸಲು ಸೂಕ್ತ ಕ್ರಮ ತೆಗೆದುಕೊಳ್ಳಲು ಸರ್ಕಾರ ಸಿದ್ದವಿದೆ ಎಂದಿದ್ದಾರೆ. ರಫ್ತು ಹೆಚ್ಚಳ ಮತ್ತು ಜಿಎಸ್ ಟಿ ಇಳಿಕೆಯ ಕಡೆಗೆ ಗಮನ ನೀಡುತ್ತಿದ್ದೇವೆ ಎಂದು ನಿತಿನ್ ಗಡ್ಕರಿ ತಿಳಿಸಿದ್ದಾರೆ.
ಸೊಸೈಟಿ ಆಫ್ ಇಂಡಿಯನ್ ಆಟೋಮೊಬೈಲ್ ಮ್ಯಾನುಫ್ಯಾಕ್ಚರರ್ಸ್ ವಾರ್ಷಿಕ ಸಮಾವೇಶದಲ್ಲಿ ಮಾತನಾಡಿದ ಅವರು, ಇಂಟರ್ನಲ್ ಕಂಬಷನ್ ಎಂಜಿನ್ (ಐಸಿಇ) ಅನ್ನು ಸ್ಥಗಿತಗೊಳಿಸುವ ಯಾವ ಯೋಜನೆಯಾಗಲಿ ಯೋಚನೆಯಾಗಲಿ ಸರ್ಕಾರದ ಮುಂದೆ ಸದ್ಯದಲ್ಲಿ ಇಲ್ಲ ಎಂದು ಹೇಳಿದ್ದಾರೆ.
“ಸದ್ಯದ ಆರ್ಥಿಕ ಸ್ಥಿತಿಯ ಅಂಕಿ- ಅಂಶಗಳಿಗೆ ಸಂಬಂಧಿಸಿದಂತೆ ವಾಹನ ಕ್ಷೇತ್ರವು ತೀವ್ರ ಹಿಂಜರಿತವನ್ನು ಎದುರಿಸುತ್ತಿದೆ. ಅದಕ್ಕೆ ಕಾರಣ ಆಗಿರುವುದು ಜಾಗತಿಕ ಆರ್ಥಿಕತೆ, ಬೇಡಿಕೆ ಹಾಗೂ ಪೂರೈಕೆ. ನಾವು ನಿಮ್ಮ ಜೊತೆ ಇದ್ದೇವೆ ಭಾರತದ ಆಟೋಮೊಬೈಲ್ ಕ್ಷೇತ್ರ ಕುಸಿಯಲು ಎಂದೂ ಬಿಡುವವುದಿಲ್ಲ ಎಂದು ನಿತಿನ್ ಗಡ್ಕರಿ ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ








