ಮೋದಿ, ಅಮಿತ್ ಶಾ ನೀತಿ ಸಂಹಿತೆ ಉಲ್ಲಂಘನೆ: ಚುನಾವಣಾ ಆಯೋಗಕ್ಕೆ ಸುಪ್ರೀಂ ನೋಟಿಸ್

ನವದೆಹಲಿ:

     ಪ್ರಧಾನಿ ನರೇಂದ್ರ ಮೋದಿ ಹಾಗೂ ಬಿಜೆಪಿ ಅಧ್ಯಕ್ಷ ಅಮಿತ್ ಶಾ ಅವರು ಚುನಾವಣಾ ನೀತಿ ಸಂಹಿತೆ ಉಲ್ಲಂಘಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಚುನಾವಣಾ ಆಯೋಗಕ್ಕೆ ಸುಪ್ರೀಂ ಕೋರ್ಟ್ ಮಂಗಳವಾರ ನೋಟಿಸ್ ಜಾರಿ ಮಾಡಿದೆ.ಪ್ರಧಾನಿ ಮೋದಿ ಹಾಗೂ ಅಮಿತ್ ಶಾ ಅವರು ರಾಜಕೀಯ ಪ್ರಚಾರಕ್ಕಾಗಿ ಸಶಸ್ತ್ರ ಪಡೆಗಳನ್ನು ಬಳಕೆ ಮಾಡಿಕೊಂಡಿದ್ದು, ದ್ವೇಷ ಭಾಷಣ ಮಾಡುವ ಮೂಲಕ ಚುನಾವಣಾ ಮಾದರಿ ನೀತಿ ಸಂಹಿತೆ ಉಲ್ಲಂಘಿಸಿದ್ದಾರೆ ಎಂದು ಆರೋಪಿಸಿ ಕಾಂಗ್ರೆಸ್ ಸಂಸದೆ ಸುಸ್ಮಿತಾ ದೇವ್ ಅವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯಿ ಅವರು, ಈ ಕುರಿತು ಪ್ರತಿಕ್ರಿಯೆ ಸಲ್ಲಿಸುವಂತೆ ಚುನಾವಣಾ ಆಯೋಗಕ್ಕೆ ಸೂಚಿಸಿದ್ದಾರೆ.

    ಅಸ್ಸಾಂ ನ ಸಿಲ್ಚಾರ್ ಕಾಂಗ್ರೆಸ್ ಸಂಸದೆ ಮತ್ತು ಅಖೀಲ ಭಾರತ ಮಹಿಳಾ ಕಾಂಗ್ರೆಸ್ ಅಧ್ಯಕ್ಷೆಯಾಗಿರುವ ಸುಸ್ಮಿತಾ ದೇವ್ ಅವರು ಸಲ್ಲಿಸಿರುವ ದೂರಿಗೆ ಸಂಬಂಧಿಸಿ ಚುನಾವಣಾ ಆಯೋಗವು ಯಾವುದೇ ಆದೇಶ ಜಾರಿ ಮಾಡಲು ಮುಕ್ತವಾಗಿದೆ ಎಂದು ಕೋರ್ಟ್ ಹೇಳಿದೆ.
ಪ್ರಧಾನಿ ಮೋದಿ, ಅಮಿತ್ ಶಾ ವಿರುದ್ಧ ದಾಖಲಾಗಿರುವ ದೂರುಗಳ ಬಗ್ಗೆ ಪರಿಶೀಲಿಸಿ ಉತ್ತರಿಸುವಂತೆ ಚುನಾವಣಾ ಆಯೋಗಕ್ಕೆ ಕೋರ್ಟ್ ನೋಟಿಸ್ ನೀಡಿದೆ. ಅಲ್ಲದೆ, ಪ್ರಕರಣದ ಮುಂದಿನ ವಿಚಾರಣೆಯನ್ನು ಮೇ 2ಕ್ಕೆ ಸುಪ್ರೀಂ ಕೋರ್ಟ್ ಮುಂದೂಡಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap