ದಾನಿಗಳ ಮಾಹಿತಿ ಕೊಡುವಂತೆ ಪಕ್ಷಗಳಿಗೆ ಸುಪ್ರೀಂ ತಾಕೀತು..!!!

ನವದೆಹಲಿ:

      ಭಾರತದಲ್ಲಿ ರಾಜಕೀಯ ಪಕ್ಷಗಳು ತಮ್ಮ ಪಕ್ಷಕ್ಕೆ ದಾನಿಗಳಿಂದ ಬರುವ ಹಣದ ಮಾಹಿತಿಯನ್ನು ಬಹಿರಂಗಪಡಿಸ ಬೇಕು ಎಂದು ಸುಪ್ರೀಂ ಕೋರ್ಟ್ ಇಂದು ಮಹತ್ವದ ಮಧ್ಯಂತರ ಆದೇಶ ಹೊರಡಿಸಿದೆ.

      ಚುನಾವಣೆ ಸಮಯದಲ್ಲಿ ರಾಜಕೀಯ ಪಕ್ಷಗಳು ಬಾಂಡ್ ಮೂಲಕ ಸಿಕ್ಕಂತಹ ದಾನಗಳ ಬಗ್ಗೆ ಮಾಹಿತಿಯನ್ನು ನೀಡಬೇಕು. ಯಾರು ದಾನ ನೀಡಿದ್ದಾರೆ ಹಾಗೂ ಎಷ್ಟು ಪಡಯಲಾಗಿದೆ ಎನ್ನುವ ಸಂಪೂರ್ಣ ದಾಖಲೆಗಳನ್ನು ಮೇ 15ರ ಒಳಗಾಗಿ ಮುಚ್ಚಿದ ಲಕೋಟಿಯಲ್ಲಿ ಚುನಾವಣಾ ಆಯೋಗಕ್ಕೆ ನೀಡಬೇಕು ಎಂದು ಸುಪ್ರೀಂ ಕೋರ್ಟ್ ಆದೇಶ ನೀಡಿದೆ.

      ಚುನಾವಣಾ ಬಾಂಡ್ ಯೋಜನೆಯನ್ನು ಪ್ರಶ್ನಿಸಿ ಎನ್‍ಜಿಒ ಒಂದು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಕೋರ್ಟ್ ಈ ಸಂಬಂಧ ಮಧ್ಯಂತರ ಆದೇಶ ನೀಡಿ , ಬಾಂಡ್ ಖರೀದಿಸುವವರ ಗುರುತು ಬಹಿರಂಗ ಪಡಿಸಲಾಗುವುದಿಲ್ಲ  ಎಂದಾದರೆ ರಾಜಕೀಯ ಪಕ್ಷಗಳಿಗೆ ದೇಣಿಗೆ ನೀಡಿಕೆಯಲ್ಲಿ ಪಾರದರ್ಶಕತೆ ತರುವ ವ್ಯವಸ್ಥೆಯೇ ವ್ಯರ್ಥವಾಗುತ್ತದೆ. ಚುನಾವಣೆಯಲ್ಲಿ ಕಪ್ಪು ಹಣ ಬಳಕೆಯನ್ನು ತಡೆಯುವ ಉದ್ದೇಶದಿಂದ ಜಾರಿಗೆ ತಂದಿರುವ ವ್ಯವಸ್ಥೆಯ ಉದ್ದೇಶವೇ ಈಡೇರದು ಎಂದು ಸುಪ್ರೀಂ ಕೋರ್ಟ್ ಅಭಿಪ್ರಾಯಪಟ್ಟಿದೆ.

ಎಲೆಕ್ಟೋರಲ್ ಬಾಂಡ್ ಅಂದರೇನು?

       ಪಕ್ಷಗಳಿಗೆ ಜನರು ನೀಡುವ ದೇಣಿಗೆಯನ್ನು ಸ್ವಚ್ಛಗೊಳಿಸುವ ನಿಟ್ಟಿನಲ್ಲಿ ಕೇಂದ್ರ ಸರ್ಕಾರವು ಮಹತ್ವದ ಹೆಜ್ಜೆ ಇಟ್ಟಿತ್ತು. 2017ರ ಬಜೆಟ್ ಭಾಷಣದಲ್ಲಿ ಚುನಾವಣಾ ಬಾಂಡ್ ಪರಿಚಯಿಸಿತ್ತು. ಎಲೆಕ್ಟೋರಲ್ ಬಾಂಡ್‍ಗೆ ಕೇಂದ್ರ ಸರ್ಕಾರವು ಅಂತಿಮ ರೂಪ ನೀಡಿದ್ದು, ಅಧಿಸೂಚನೆ ಹೊರಡಿಸಿದೆ.

       ಯಾವುದೇ ರಾಜಕೀಯ ಪಕ್ಷಕ್ಕೆ ದೇಣಿಗೆ ನೀಡಲು ಇಚ್ಛಿಸುವವರು ಆಯ್ದ ಸ್ಟೇಟ್ ಬ್ಯಾಂಕ್ ಆಫ್ ಇಂಡಿಯಾ (ಎಸ್‍ಬಿಐ) ಬ್ರ್ಯಾಂಚ್ ಮೂಲಕ ನಿರ್ದಿಷ್ಟ ಮೊತ್ತದ ಎಲೆಕ್ಟೋರಲ್ ಬಾಂಡ್ ಖರೀದಿಸಿ. ಬಳಿಕ ಅದನ್ನು ರಾಜಕೀಯ ಪಕ್ಷಗಳಿಗೆ ನೀಡಬಹುದು. ಈ ಮೂಲಕ ದಾಣಿಗಳು ನೀಡಿದ ಬಾಂಡ್ ಪಡೆದ ರಾಜಕೀಯ ಪಕ್ಷವು ತಮ್ಮ ಬ್ಯಾಂಕ್ ಗೆ ಬಾಂಡ್ ಸಲ್ಲಿಸಿ, ಹಣವನ್ನು ಖಾತೆಗೆ ವರ್ಗಾವಣೆ ಮಾಡಿಕೊಳ್ಳಬಹುದು.

      ಈ ಬಾಂಡ್ ಗಳು  1 ಸಾವಿರ ರೂ., 10 ಸಾವಿರ ರೂ., 1 ಲಕ್ಷ ರೂ., 10 ಲಕ್ಷ ರೂ., 1 ಕೋಟಿ ರೂ. ಮೌಲ್ಯದ ವರೆಗೂ ಪರಿಚಯಿಸಲಾಗಿತ್ತು. ಈ ಎಲೆಕ್ಟೋರಲ್ ಬಾಂಡ್‍ಗೆ ಬ್ಯಾಂಕ್‍ನಿಂದ ಯಾವುದೇ ರೀತಿಯ ಬಡ್ಡಿ ದೊರೆಯುವುದಿಲ್ಲ. ರಾಜಕೀಯ ಪಕ್ಷಗಳು ತಮ್ಮ ಖಾತೆಗೆ ಹಣ ವರ್ಗಾವಣೆ ಮಾಡಿಕೊಳ್ಳುವವರೆಗೂ ಆ ಹಣವು ದಾನ ಮಾಡಿದವರ ಖಾತೆಯಲ್ಲೇ ಇರುತ್ತದೆ. ಆದರೆ ಈ ಬಾಂಡ್ ಅನ್ನು 15 ದಿನಗಳ ಒಳಗಾಗಿ ಖಾತೆಗೆ ವರ್ಗಾವಣೆ ಮಾಡಿಕೊಳ್ಳಬೇಕು.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap