ನವದೆಹಲಿ:
ಶಬರಿಮಲೆ ವಿವಾದದ ಕುರಿತಾಗಿ ಇಂದು ವಿಚಾರಣೆ ಕೈಗೆತ್ತಿಕೊಂಡ ಸುಪ್ರೀಂ ಕೋರ್ಟ್ ನ 9 ನ್ಯಾಯಾಧೀಶರ ವಿಸ್ತ್ರೃತ ಪೀಠ, ಎಲ್ಲಾ ವಕೀಲರು ಸಭೆ ನಡೆಸಿ ಚರ್ಚಿಸಿ ತೀರ್ಮಾನಕ್ಕೆ ಬರುವಂತೆ ಹೇಳಿದೆ. ಹಿಂದಿನ ಐವರು ನ್ಯಾಯಾಧೀಶರನ್ನೊಳಗೊಂಡ ನ್ಯಾಯಪೀಠ ಕೇಳಿರುವ 7 ಪ್ರಶ್ನೆಗಳನ್ನು ಪರಿಗಣಿಸಲಾಗುವುದು ಎಂದು ಕೂಡ ಹೇಳಿದೆ.
ಈ ವಿಚಾರಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ನ ಸೆಕ್ರೆಟರಿ ಜನರಲ್ ಗೆ ನಾಲ್ವರು ವಕೀಲರ ನಡುವೆ ಸಮನ್ವಯತೆ ತರುವಂತೆ ಸೂಚಿಸಲಾಗಿದ್ದು ,ವಿವಿಧ ಧಾರ್ಮಿಕ ಕೇಂದ್ರಗಳಲ್ಲಿ ಮಹಿಳೆಯರ ವಿರುದ್ಧ ತಾರತಮ್ಯ ತೋರಿಸಲಾಗುತ್ತದೆ ಎಂದು ಆಕ್ಷೇಪಿಸಿ ಸಲ್ಲಿಸಲಾಗಿದ್ದ ಅರ್ಜಿಯನ್ನು ಮೂರು ವಾರಗಳ ನಂತರ ವಿಚಾರಣೆ ನಡೆಸಲಾಗುವುದು ಎಂದು ಕೂಡ ಹೇಳಿದೆ.
ಮುಖ್ಯ ನ್ಯಾಯಮೂರ್ತಿ ಎಸ್ ಎ ಬೊಬ್ಡೆ ಅವರ ನೇತೃತ್ವದ 9 ನ್ಯಾಯಾಧೀಶರನ್ನೊಳಗೊಂಡ ಸಾಂವಿಧಾನಿಕ ಪೀಠವು ವಿಚಾರಣೆಯನ್ನು ಕೈಗೆತ್ತಿಕೊಂಡು, ಶಬರಿಮಲೆಗೆ ಎಲ್ಲಾ ವಯೋಮಾನದ ಮಹಿಳೆಯರು ಪ್ರವೇಶಿಸುವ ಕುರಿತ ವಿಚಾರಣೆಯನ್ನು ಮಾತ್ರ ನಡೆಸಲಿದೆ. ಆದರೆ ಈ ವಿವಾದ ಕುರಿತು ವಕೀಲರೆಲ್ಲರೂ ಸಭೆ ಸೇರಿ ಒಂದು ತೀರ್ಮಾನಕ್ಕೆ ಬಂದ ಮೇಲೆ ತೀರ್ಪು ನೀಡಲಾಗುವುದು ಎಂದು ಹೇಳಿತು. ಈ ಹಿನ್ನಲೆಯಲ್ಲಿ ಇದೇ 17ರಂದು ವಕೀಲರ ಸಭೆ ಕರೆಯಲು ಸುಪ್ರೀಂ ಕೋರ್ಟ್ ನ ಸೆಕ್ರೆಟರಿ ಜನರಲ್ ಗೆ ಕೋರ್ಟ್ ಇದೇ ಸಂದರ್ಭದಲ್ಲಿ ಆದೇಶ ನೀಡಿತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ