ನವದೆಹಲಿ:

ತೀವ್ರ ಕುತೂಹಲ ಕೆರಳಿಸಿದ್ದ ಅಯೋಧ್ಯೆ ರಾಮ ಮಂದಿರ ವಿಚಾರವಾಗಿ ಸಲ್ಲಿಸಿರುವ ಎಲ್ಲಾ ಅರ್ಜಿಗಳನ್ನು ತುರ್ತಾಗಿ ಪರಿಶೀಲನೆ ನಡೆಸಲು ಸುಪ್ರೀಂಕೋರ್ಟ್ ಇಂದು ತಿರಸ್ಕರಿಸಿದೆ ಎಂದು ತಿಳಿಸಲಾಗಿದೆ.
ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೋಯ್ ಹಾಗೂ ನ್ಯಾಯಮೂರ್ತಿ ಎಸ್.ಕೆ. ಕೌಲ್ ಅವರಿದ್ದ ಪೀಠ ತುರ್ತು ಅರ್ಜಿ ಪರಿಶೀಲನೆ ನಡೆಸಲು ತಿರಸ್ಕರಿಸಿದೆ.
ಅಯೋಧ್ಯೆ ವಿವಾದ ಸಂಬಂಧ ಈಗಾಗಲೇ ನಾವು ತೀರ್ಪು ನೀಡಿದ್ದೇವೆ. ಮುಂದಿನ ಜನವರಿ ತಿಂಗಳಿನಲ್ಲಿ ಅರ್ಜಿಗಳನ್ನು ಪರಿಶೀಲನೆ ನಡೆಸಲಾಗುವುದು ಎಂದು ಹೇಳುವ ಮೂಲಕ ನ್ಯಾಯಪೀಠ, ತುರ್ತು ಅರ್ಜಿ ಪರಿಶೀಲನೆ ನಡೆಸಲು ತಿರಸ್ಕರಿಸಿದೆ ಎಂದು ತಿಳಿದು ಬಂದಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
