ದೇವ ಮಾನವನ ಜಾಮೀನು ಅರ್ಜಿ ತಿರಸ್ಕರಿಸಿದ ಸುಪ್ರೀಂ..!!

ನವದೆಹಲಿ

     ಗುಜರಾತ್‌ನಲ್ಲಿ ದಾಖಲಾಗಿದ್ದ ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಸ್ವಯಂ ಘೋಷಿತ ದೇವ ಮಾನವ ಅಸಾರಾಮ್ ಬಾಪು ಅವರ ಜಾಮೀನು ಅರ್ಜಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದೆ.

     ನ್ಯಾ. ಎನ್ ವಿ ರಮಣ ನೇತೃತ್ವದ ನ್ಯಾಯಪೀಠವು ಗುಜರಾತ್ ಸರ್ಕಾರದ ಪರವಾಗಿ ಹಾಜರಾದ ಸಾಲಿಸಿಟರ್ ಜನರಲ್ ತುಷಾರ್ ಮೆಹ್ತಾ ಅವರಿಗೆ ಈ ಪ್ರಕರಣದ ವಿಚಾರಣೆ ಇನ್ನೂ ನಡೆಯುತ್ತಿದೆ ಮತ್ತು 210 ಸಾಕ್ಷಿಗಳ ವಿಚಾರಣೆ ಇನ್ನೂ ಬಾಕಿ ಇದೆ ಎಂದು ತಿಳಿಸಿದೆ.

     ಜಾಮೀನು ಅರ್ಜಿಯನ್ನು ವಜಾಗೊಳಿಸುವ ಸಂದರ್ಭದಲ್ಲಿ ನ್ಯಾಯಪೀಠವೂ ಕೆಳ ನ್ಯಾಯಾಲಯದಲ್ಲಿ ವಿಚಾರಣೆ  ಮುಂದುವರಿಯುತ್ತದೆ ಮತ್ತು ಅಸಾರಾಂ ಬಾಪು ಅವರ ಮನವಿಯನ್ನು ವಜಾಗೊಳಿಸುವ ಮುನ್ನ ಈ ಮೊದಲು ಗುಜರಾತ್ ಹೈಕೋರ್ಟ್ ನೀಡಿದ ಪ್ರಾಥಮಿಕ ವರದಿಯಿಂದ ಪ್ರಭಾವಿತರಾಗದೇ ವಿಚಾರಣೆ ಮುಂದುವರೆಯಲಿದೆ ಎಂದು ತಿಳಿಸಿದೆ.

    ಇದಲ್ಲದೇ ಸೂರತ್ ಮೂಲದ ಇಬ್ಬರು ಸಹೋದರಿಯರು ಅಸಾರಾಮ್ ಮತ್ತು ಅವರ ಪುತ್ರ ನಾರಾಯಣ್ ಸಾಯಿ ವಿರುದ್ಧ ಅತ್ಯಾಚಾರ ಮತ್ತು ಅಕ್ರಮವಾಗಿ ತಮ್ಮ ಆಶ್ರಮದಲ್ಲಿ ಅವರನ್ನು ಬಂದಿಸಿದ್ದರು ಎಂದು ಪ್ರತ್ಯೇಕ ದೂರು ದಾಖಲಿಸಿದ್ದಾರೆ ಎಂದು ನ್ಯಾಯಾಲಯ ತಿಳಿಸಿದೆ.

   ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ 

Recent Articles

spot_img

Related Stories

Share via
Copy link
Powered by Social Snap