ನವದೆಹಲಿ:
ಬಾಲಿವುಡ್ ನಟ ಸುಶಾಂತ್ ಸಿಂಗ್ ರಜಪೂತ್ ಅವರು ಸಾವು ಪ್ರಕರಣವನ್ನು ಕೇಂದ್ರೀಯ ತನಿಖಾ ದಳ (ಸಿಬಿಐ)ಕ್ಕೆ ಒಪ್ಪಿಸಿರುವ ಬಿಹಾರ ಸರ್ಕಾರದ ಶಿಫಾರಸನ್ನು ಒಪ್ಪಿದ್ದೇವೆಂದು ಕೇಂದ್ರ ಸರ್ಕಾರ ಸುಪ್ರೀಂಕೋರ್ಟ್’ಗೆ ಬುಧವಾರ ತಿಳಿಸಿದೆ. ಬಾಲಿವುಡ್ ನಟಿ ರಿಯಾ ಚಕ್ರವರ್ತಿಯವರು ಸುಶಾಂತ್ ಆತ್ಮಹತ್ಯೆ ಪ್ರಕರಣದ ಎಫ್ಐಆರ್’ನ್ನು ಪಾಟ್ನಾದಿಂದ ಮುಂಬೈಗೆ ವರ್ಗಾಯಿಸುವಂತೆ ಕೋರಿ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದರು.
ಈ ಸಂಬಂಧ ಇಂದು ವಿಚಾರಣೆ ನಡೆಸಿದ ನ್ಯಾಯಮೂರ್ತಿ ಹೃಶಿಕೇಶ್ ರಾಯ್ ಅವರಿದ್ದ ನ್ಯಾಯಪೀಠ, ನಟನ ಸಾವಿನ ಹಿಂದಿರುವ ಸತ್ಯಾಸತ್ಯತೆ ಹೊರ ಬೀಳಬೀಳಬೇಕೆಂದು ತಿಳಿಸಿದೆ.
ಈ ನಡುವೆ ಕೇಂದ್ರದ ಪರವಾಗಿ ನ್ಯಾಯಾಲಯಕ್ಕೆ ಹಾಜರಿದ್ದ ಸಾಲಿಸಿಟರ್ ಜನರಲ್ ತುಶಾರ್ ಮೆಹ್ತಾ ಅವರು, ಪ್ರಕರಣವನ್ನು ಸಿಬಿಐಗೆ ಹಸ್ತಾಂತರಿಸಿರುವ ಬಿಹಾರ ಸರ್ಕಾರದ ನಿರ್ಧಾರವನ್ನು ಕೇಂದ್ರ ಸರ್ಕಾರ ಒಪ್ಪಿಕೊಂಡಿದೆ ಎಂದು ತಿಳಿಸಿದ್ದಾರೆ.