ಕೋಲ್ಕತ್ತ:
ಪ.ಬಂಗಾಳದ ಆಡಳಿತಾರೂಢ ಟಿಎಂಸಿ ಶಾಸಕ ತಮೊನಾಶ್ ಘೋಷ್ (60) ಅವರು ಕೊರೋನಾಗೆ ಬಲಿಯಾಗಿದ್ದಾರೆ ಎಂದು ಆಸ್ಪತ್ರೆ ಮೂಲಗಳು ತಿಳಿಸಿವೆ. ಮೇ ತಿಂಗಳಲ್ಲಿ ಸೋಂಕು ದೃಢಪಟ್ಟಿದ್ದ ಅವರನ್ನು ಆಸ್ಪತ್ರೆಗೆ ಸೇರಿಸಲಾಗಿತ್ತು. ಘೋಷ್ ಅವರಿಗೆ ತೀವ್ರತರವಾದ ಹೃದಯ ಹಾಗೂ ಮೂತ್ರಪಿಂಡ ಸಮಸ್ಯೆ ಇತ್ತು.ದಕ್ಷಿಣ 24 ಪರಗಣ ಜಿಲ್ಲೆಯ ಫಾಲ್ತಾ ವಿಧಾನಸಭಾ ಕ್ಷೇತ್ರವನ್ನು ಅವರು 3 ಬಾರಿ ಪ್ರತಿನಿಧಿಸಿದ್ದರು.
ಘೋಷ್ ಸಾವಿಗೆ ಮುಖ್ಯಮಂತ್ರ ಮಮತಾ ಬ್ಯಾನರ್ಜಿ ಸಂತಾಪ ವ್ಯಕ್ತಪಡಿಸಿದ್ದಾರೆ. ‘ಇದು ಅತ್ಯಂತ ದುಃಖದ ಸಂಗತಿ. ಮೂರು ಬಾರಿ ಫಾಲ್ತಾ ಕ್ಷೇತ್ರದಿಂದ ಆಯ್ಕೆಯಾಗಿದ್ದ ಅವರು 1998ರಿಂದ ಪಕ್ಷದ ನಿಷ್ಠಾವಂತ ಕಾರ್ಯಕರ್ತ ಹಾಗೂ ಖಜಾಂಚಿಯಾಗಿ ಕೆಲಸ ಮಾಡಿದ್ದರು. 35 ವರ್ಷಗಳ ಕಾಲ ನಮ್ಮ ಜೊತೆಗಿದ್ದ ಘೋಷ್ ಇಂದು ನಮ್ಮನ್ನಗಲಿದ್ದಾರೆ. ಜನರು ಹಾಗೂ ಪಕ್ಷಕ್ಕಾಗಿ ಅವರು ದುಡಿದಿದ್ದಾರೆ. ಸಮಾಜ ಸೇವೆಗೂ ಅವರ ಕೊಡುಗೆ ಅಪಾರ’ ಎಂದು ಮಮತಾ ಟ್ವೀಟ್ ಮಾಡಿದ್ದಾರೆ.
ಇನ್ನು ಮೃತರು ಪತ್ನಿ ಮತ್ತು ಇಬ್ಬರು ಹೆಣ್ಣುಮಕ್ಕಳನ್ನು ಅಗಲಿದ್ದಾರೆ ಎನ್ನಲಾಗಿದೆ . ಘೋಷ್ ಅವರ ಸ್ಥಾನವನ್ನು ಯಾರೂ ಸಹ ತುಂಬಲು ಸಾಧ್ಯವಿಲ್ಲ’ ಎಂದು ಅವರು ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ