ನವದೆಹಲಿ:
೬ ವಿಮಾನ ನಿಲ್ದಾಣಗಳ ಕಾರ್ಯಾಚರಣೆ ಸಂಬಂಧ ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರ ೧೦ ಕಂಪನಿಗಳಿಂದ ೩೨ ತಾಂತ್ರಿಕ ಬಿಡ್‌ಗಳನ್ನು ಸ್ವೀಕರಿಸಿದೆ.
ಗುವಾಹತಿ, ತಿರುವನಂತಪುರಂ, ಲಕ್ನೋ, ಮಂಗಳೂರು, ಅಹ್ಮದಾಬಾದ್ ಮತ್ತು ಜೈಪುರ ವಿಮಾನ ನಿಲ್ದಾಣಗಳಿಗೆ ಈ ಬಿಡ್ ಸ್ವೀಕರಿಸಲಾಗಿದೆ. ಸಾರ್ವಜನಿಕ ಮತ್ತು ಖಾಸಗಿ ಸಹಭಾಗಿತ್ವದಡಿ ಈ ೬ ವಿಮಾನ ನಿಲ್ದಾಣಗಳ ಅಭಿವೃದ್ಧಿ, ಕಾರ್ಯಾಚರಣೆ ಮತ್ತು ನಿರ್ವಹಣೆಗಾಗಿ ವಿಮಾನ ನಿಲ್ದಾಣ ಪ್ರಾಧಿಕಾರ ಬಿಡ್‌ಗಳನ್ನು ಆಹ್ವಾನಿಸಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
