ಕುಲ್ಗಾಮ್:

ಕಾಶ್ಮೀರದ ಕುಲ್ಗಾಮ್ ಜಿಲ್ಲೆಯ ಸೇನಾ ಶಿಬಿರದ ಮೇಲೆ ಉಗ್ರರು ದಾಳಿ ನಡೆಸಿದ್ದಾರೆ, ದಾಳಿಯಲ್ಲಿ ಓರ್ವ ಸಾಮಾನ್ಯ ಪ್ರಜೆ ಗಂಭೀರ ಗಾಯಗಳಾಗಿವೆ ಎಂದು ತಿಳಿಸಲಾಗಿದೆ.
ಖುದ್ವಾನಿ ಎಂಬ ಪ್ರದೇಶದಲ್ಲಿ ಸೇನೆಯ ಶಿಬಿರದ ಮೇಲೆ ದಾಳಿ ನಡೆಸಲಾಗಿದೆ ಎಂದು ತಿಳಿಸಿದ್ದಾರೆ ಶಬಿರದ ಬಳಿ ಬಂದ ಉಗ್ರರು ಏಕಾಏಕಿ ಗುಂಡಿನ ದಾಳಿ ನಡೆಸಲು ಆರಂಭಿಸಿದ್ದರು. ಕೂಡಲೇ ಉಗ್ರರ ವಿರುದ್ಧ ಸೇನಾಪಡೆಗಳು ಕಾರ್ಯಾಚರಣೆಗಿಳಿದಿವೆ ಎಂದು ತಿಳಿಸಲಾಗಿದೆ . ಪ್ರಸ್ತುತ ಸ್ಥಳದಲ್ಲಿ ಉಗ್ರರು ಹಾಗೂ ಭದ್ರತಾಪಡೆಗಳ ನಡುವೆ ಭಾರೀ ಗುಂಡಿನ ಕಾಳಗ ನಡೆಯುತ್ತಿದೆ ಎಂದು ವರದಿಯಾಗಿವೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
