ಮುಂಬೈ:
ಮಹಾರಾಷ್ಟ್ರದಲ್ಲಿ ಚುನಾವಣೆ ಮುಗಿದು ಸರ್ಕಾರ ರಚನೆಗಾಗಿ ಉಭಯ ಪಕ್ಷಗಳು ತೀವ್ರ ಕಸರತ್ತು ನಡೆಸುತ್ತಿರುವ ಬೆನ್ನಲೆ ಮುಂದಿನ ಮುಖ್ಯಮಂತ್ರಿ ನಮ್ಮ ಪಕ್ಷದವರೇ ಆಗುತ್ತಾರೆ ಎಂದು ಸಂಜಯ್ ರಾವತ್ ಪನರುಚ್ಚರಿಸಿದ್ದಾರೆ.
ರಾಜಕೀಯ ಚಿತ್ರಣ ಬದಲಾಗುತ್ತಿದ್ದು ಸಾಮಾಜಿಕ ನ್ಯಾಯ ಮತ್ತು ಮಹಾರಾಷ್ಟ್ರದ ಜನತೆಗಾಗಿ ಹಗಲಿರುಳು ಹೋರಾಡುತ್ತಿರುವ ನಮ್ಮ ಪಕ್ಷಕ್ಕೆ ಮುಖ್ಯಮಂತ್ರಿ ಗದ್ದುಗೆ ಸಿಗಲಿದೆ ಎಂದಿದ್ದಾರೆ.
“ಮಹಾರಾಷ್ಟ್ರದಲ್ಲಿ ಯಾವ ಸರ್ಕಾರ ರಚನೆಯಾಗಬೇಕು, ಯಾರು ಮುಖ್ಯಮಂತ್ರಿಯಾಗಬೇಕು ಎಂಬ ನಿರ್ಧಾರ ಮಹಾರಾಷ್ಟ್ರದಲ್ಲಿಯೇ ಆಗುತ್ತದೆಯೇ ಹೊರತು ದೆಹಲಿಯಲ್ಲಿ ಅಲ್ಲಾ” ಎಂದಿದ್ದಾರೆ,ಮಹಾರಾಷ್ಟ್ರದ ಪ್ರಾದೇಶಿಕ ಪಕ್ಷವಾದ ಶಿವಸೇನೆಯಿಂದ ಮುಖ್ಯಮಂತ್ರಿಯಾಗುತ್ತಾರೆ ಎಂದು ಸುದ್ದಿಗಾರರೊಂದಿಗೆ ಮಾತನಾಡುತ್ತಾ ಹೇಳಿದರು.ಶಿವಸೇನೆ ಎನ್ ಸಿಪಿ ಜೊತೆ ಮೈತ್ರಿ ಮಾಡಿಕೊಳ್ಳುತ್ತದೆಯೇ ಎಂದು ಕೇಳಿದಾಗ ಶರದ್ ಪವಾರ್ ಮುಂದಿನ ಮುಖ್ಯಮಂತ್ರಿಯಾಗುವುದಿಲ್ಲ ಎಂದು ಖಾರವಾಗಿಇ ಹೇಳಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ