ಮಹಾರಾಷ್ಟ್ರ ಸರ್ಕಾರ ರಚನೆಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ ಆಗಿದೆ : ಸೋನಿಯಾ ಗಾಂಧಿ

ನವದೆಹಲಿ:

   ಮಹಾರಾಷ್ಟ್ರದಲ್ಲಿ ರಾತ್ರೋ ರಾತ್ರಿ ತರಾತುರಿಯಲ್ಲಿ ಸರ್ಕಾರ ರಚನೆ ಮಾಡಿದ ಬಿಜೆಪಿಯು ಪ್ರಜಾಪ್ರಭುತ್ವದ ಕಗ್ಗೋಲೆ ಮಾಡಿದೆ ಎಂದು ಲೋಕಸಭೆಯಲ್ಲಿ ವಿಪಕ್ಷಗಳು ಕಿಡಿಕಾರಿವೆ.ಸಂಸತ್ತಿನ ಹೊರಗಡೆ ಸಂಸತ್ತಿನ ಒಳಗಡೆ ಮಹಿಳೆಯರ ಮೇಲಿನ ದೌರ್ಜನ್ಯ ಖಂಡಿಸಿ ಹೊರ ಭಾಗದಲ್ಲಿ ಕಾಂಗ್ರೆಸ್​ ಅಧ್ಯಕ್ಷೆ ಸೋನಿಯಾ ಗಾಂಧಿ ನೇತೃತ್ವದಲ್ಲಿ ಪ್ರತಿಭಟನೆ ನಡೆಯುತ್ತಿದ್ದರೆ, ಲೋಕಸಭೆ ಅಧಿವೇಶನದಲ್ಲಿ ಕಾಂಗ್ರೆಸ್​ ಮಾಜಿ ಅಧ್ಯಕ್ಷ ರಾಹುಲ್​ಗಾಂಧಿ ಮೋದಿ ಸರ್ಕಾರದ ವಿರುದ್ಧ ಹರಿಹಾಯ್ದಿದ್ದಾರೆ.

   ನಾನು ಒಂದು ಪ್ರಶ್ನೆಯನ್ನೂ ಕೇಳುವುದಿತ್ತು. ಆದರೆ, ಅದನ್ನು ಕೇಳುವುದರಲ್ಲಿ ಯಾವುದೇ ಅರ್ಥವಿಲ್ಲ, ಏಕೆಂದರೆ, ಮಹಾರಾಷ್ಟ್ರದಲ್ಲಿ ಪ್ರಜಾಪ್ರಭುತ್ವವನ್ನು ಕೊಲೆ ಮಾಡಲಾಗಿದೆ ಎಂದು ರಾಹುಲ್ ಗಾಂಧಿ ಕಿಡಿಕಾರಿದರಲ್ಲದೆ ಇದರಿಂದ ಸಭೆಯಲ್ಲಿ ಕೋಲಾಹಲ ಸೃಷ್ಠಿಯಾಯಿತು .ಇನ್ನು ಇಷ್ಟು ದಿನ ಎಲ್ಲವನ್ನೂ ಸುಮ್ಮನೆ ಗಮನಿಸಿದರು ಒಂದೂ ಮಾತನಾಡದ ಅವರು, ಇಂದು ಸಂಸತ್ತಿನ ಹೊರಭಾಗದಲ್ಲಿ ಪ್ರತಿಭಟನೆ ವೇಳೆ ಮಹಾರಾಷ್ಟ್ರ ಸರ್ಕಾರ ರಚನೆಯಿಂದ ಪ್ರಜಾಪ್ರಭುತ್ವದ ಕಗ್ಗೊಲೆ  ಆಗಿದೆ ಎಂದರು.

  ಲೋಕಸಭೆಯಲ್ಲಿ ತೀವ್ರ ಗದ್ದಲ ಎಬ್ಬಸಿದ ಕಾಂಗ್ರೆಸ್​ ನಾಯಕರು ‘ಸಂವಿಧಾನದ ಹತ್ಯೆ ನಿಲ್ಲಿಸಿ’ ಎಂದು ಕೂಗಾಟ ನಡೆಸಿದರು. ಹೀಗಾಗಿ ಲೋಕಸಭೆಯನ್ನು 12 ಗಂಟೆಯವರೆಗೆ ಹಾಗೂ ರಾಜ್ಯಸಭೆಯನ್ನು 2 ಗಂಟೆವರೆಗೆ ಮುಂದೂಡಲಾಗಿತು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap