ಕೇಂದ್ರದ ನೀತಿಗಳಿಂದ ದೇಶದ ಜಿಡಿಪಿ ಕುಸಿದಿದೆ : ರಾಹುಲ್ ಗಾಂಧಿ

ನವದೆಹಲಿ:

  ಮೋದಿ ಸರ್ಕಾರದ ನೀತಿಗಳಿಂದಾಗಿ ಜಿಡಿಪಿಯು ಕುಸಿದಿದೆ. ಕೇಂದ್ರ ಸರ್ಕಾರವು ಭಾರತದ ಯುವ ಜನರ ಭವಿಷ್ಯವನ್ನು ಹತ್ತಿಕ್ಕಿದೆ. ಅವರ ಧ್ವನಿಯನ್ನು ಸರ್ಕಾರಕ್ಕೆ ಕೇಳುವಂತೆ ಮಾಡೋಣ. ಇದಕ್ಕಾಗಿ ಗುರುವಾರ ಬೆಳಿಗ್ಗೆ 10 ರಿಂದ 10 ಗಂಟೆಗಳ ಕಾಲ ನಡೆಯಲಿರುವ ಕಾಂಗ್ರೆಸ್‌ ಪಕ್ಷದ ‘ ಸ್ಪೀಕ್ ಅಪ್‌ ಫಾರ್‌ ಜಾಬ್ಸ್‌’ ಎಂಬ ಅಭಿಯಾನದಲ್ಲಿ ಎಲ್ಲರೂ ಭಾಗವಹಿಸಿ ಎಂದು ಮನವಿ ಮಾಡಿದ್ದಾರೆ.

    ‘ಮೋದಿ ಸರ್ಕಾರವು ಪ್ರತಿವರ್ಷ 2 ಕೋಟಿ ಉದ್ಯೋಗ ಸೃಷ್ಟಿ ಮಾಡುವ ಭರವಸೆ ನೀಡಿತ್ತು. ಆದರೆ ಈ ಆರು ವರ್ಷಗಳಲ್ಲಿ 12 ಕೋಟಿ ಉದ್ಯೋಗ ಸೃಷ್ಟಿಸುವ ಬದಲು 14 ಕೋಟಿ ಜನರ ಕೆಲಸಗಳನ್ನು ಕಿತ್ತುಕೊಂಡಿದೆ’ ಎಂದು ಕಾಂಗ್ರೆಸ್‌ ವಕ್ತಾರ ರಣದೀಪ್‌ ಸುರ್ಜೇವಾಲ ಟೀಕಿಸಿದರು.‘ನೀವೆಲ್ಲರು #SpeakUpForJobs ಅಭಿಯಾನದಲ್ಲಿ ಭಾಗಿಯಾಗಿ ಬಿಜೆಪಿಯ ತಪ್ಪು ನೀತಿಗಳ ವಿರುದ್ಧ ಧ್ವನಿ ಎತ್ತಬೇಕು’ ಎಂದು ಕಾಂಗ್ರೆಸ್‌ ಟ್ವೀಟ್‌ ಮಾಡಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap