ಭಾರತ: 4.10ಲಕ್ಷಕ್ಕೇರಿದ ಸೋಂಕಿತರ ಸಂಖ್ಯೆ

ನವದೆಹಲಿ:

    ಲಾಕ್’ಡೌನ್ ಸಡಿಲಗೊಂಡ ಬಳಿಕ ಕೊರೋನಾ ಸೋಂಕಿತರ ಸಂಖ್ಯೆ ಹೊಸದೊಂದು ಮೈಲಿಗಲ್ಲು ನಿರ್ಮಿಸಲು ಸಜ್ಜಾಗಿದೆ. ಭಾನುವಾರ ದೇಶದಲ್ಲಿ ಹೊಸದಾಗಿ 15,413 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ, ಒಟ್ಟು ಸೋಂಕಿತರ ಸಂಖ್ಯೆ 4.10ಲಕ್ಷಕ್ಕೆ ಏರಿಕೆಯಾಗಿದೆ.

    ಗಮನಾರ್ಹ ವಿಚಾರವೆಂದರೆ 2 ಲಕ್ಷಕ್ಕೂ ಹೆಚ್ಚು ಪ್ರಕರಣಗಳು ಕೇವಲ ಜೂನ್ ತಿಂಗಳೊಂದರಲ್ಲಿಯೇ ದಾಖಲಾಗಿದೆ. ಜೂ.1ರಿಂದ ಜೂ.20ರ ಅವಧಿಯಲ್ಲಿ 2,04,513 ಕೊರೋನಾ ಸೋಂಕಿತರು ಪತ್ತೆಯಾಗಿದ್ದಾರೆಂದು ಸಚಿವಾಲಯ ಮಾಹಿತಿ ನೀಡಿದೆ. 

     ಕಳೆದ 24 ಗಂಟೆಗಳಲ್ಲಿ ದೇಶದಲ್ಲಿ ಬರೋಬ್ಬರಿ 15413 ಮಂದಿಯಲ್ಲಿ ಸೋಂಕು ಪತ್ತೆಯಾಗಿದ್ದು, ಈ ವರೆಗೂ ದೇಶದಲ್ಲಿ ಸೋಂಕಿತರ ಸಂಖ್ಯೆ 4,10,461 ಕ್ಕೆ ಏರಿಕೆಯಾಗಿದೆ. ಇನ್ನು 4,10,461 ಮಂದಿ ಸೋಂಕಿತರ ಪೈಕಿ 227756 ಸೋಂಕಿನಿಂದ ಗುಣಮುಖರಾಗಿದ್ದು, ಇನ್ನೂ ದೇಶದಲ್ಲಿ 169451 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆ. 

      ಇನ್ನು ನಿನ್ನೆ ಒಂದೇ ದಿನ 306 ಮಂದಿ ಸಾವನ್ನಪ್ಪಿದ್ದು, ಇದರೊಂದಿಗೆ ಸಾವಿನ ಸಂಖ್ಯೆ ಕೂಡ 13,254ಕ್ಕೆ ಏರಿಕೆಯಾಗಿದೆ . ದೇಶದ ಇತರೆ ರಾಜ್ಯಗಳಿಗೆ ಹೋಲಿಕೆ ಮಾಡಿದರೆ ಮಹಾರಾಷ್ಟ್ರದಲ್ಲಿ ಕೊರೋನಾ ಆರ್ಭಟ ಹೆಚ್ಚಾಗಿದ್ದು, ಈ ವರೆಗೂ ಆ ರಾಜ್ಯದಲ್ಲಿ 1,28,205 ಮಂದಿಯಲ್ಲಿ ಸೋಂಕು ಪತ್ತೆಯಾಗಿದೆ. ಇನ್ನು ದೆಹಲಿಯಲ್ಲಿ 56,746 ಮಂದಿ ಸೋಂಕಿನಿಂದ ಬಳಲುತ್ತಿದ್ದಾರೆಂದು ತಿಳಿದುಬಂದಿದೆ. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap