ವರಿಷ್ಠರ ಒಪ್ಪಿಗೆ ಬಳಿಕ ಸಂಪುಟ ವಿಸ್ತರಣೆ : ಯಡಿಯೂರಪ್ಪ

ನವದೆಹಲಿ

    ರಾಜ್ಯ ವಿಧಾನ ಮಂಡಲದ ಅಧಿವೇಶನ ಪ್ರಾರಂಭವಾಗುವ ಮುನ್ನವೆ ಸಂಪುಟ ವಿಸ್ತರಣೆ ಮಾಡಬೇಕೆಂಬುದು ತಮ್ಮ ಅಪೇಕ್ಷೆಯಾಗಿದೆ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ತಿಳಿಸಿದರು.

    ಕರ್ನಾಟಕ ಭವನ-1 ಕಾವೇರಿಯಲ್ಲಿ ತಮ್ಮನ್ನು ಭೇಟಿ ಮಾಡಿದ ಮಾಧ್ಯಮದವರ ಜೊತೆಗೆ ಮಾತನಾಡಿದ ಅವರು, ಭಾರತೀಯ ಜನತಾ ಪಕ್ಷದ ರಾಷ್ಟ್ರಾಧ್ಯಕ್ಷ ಜಗನ್ ಪ್ರಕಾಶ್ ನಡ್ಡಾ ಅವರ ಜೊತೆಗೆ ರಾಜ್ಯ ಸಚಿವ ಸಂಪುಟ ವಿಸ್ತರಣೆ ಕುರಿತಂತೆ ಶುಕ್ರವಾರ ಸಮಾಲೋಚನೆ ನಡೆಸಲಾಗಿದೆ. ಪಕ್ಷದ ರಾಷ್ಟ್ರಾಧ್ಯಕ್ಷರು ಪ್ರಧಾನಿ ಜೊತೆಗೆ ಚರ್ಚಿಸಿ ಸೂಚನೆ ನೀಡುವ ಸಾಧ್ಯತೆ ಇದೆ. ಮುಖ್ಯಮಂತ್ರಿಯವರು ವರಿಷ್ಠರ ಅನುಮತಿ ಮತ್ತು ಸಹಮತಿ ದೊರೆತ ಕೂಡಲೇ ಸಂಪುಟ ವಿಸ್ತರಣೆ ಮಾಡುವುದಾಗಿ ಹೇಳಿದರು.

    ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಶುಕ್ರವಾರ ಭೇಟಿಯಾಗಿ ರಾಜ್ಯದ ಅಭಿವೃದ್ಧಿ ಕುರಿತಂತೆ ಚರ್ಚಿಸ ಲಾಗಿದೆ. ರಾಜ್ಯದ ಪ್ರಸ್ತಾವನೆಗಳಿಗೆ ಪ್ರಧಾನಿ ಅವರು ಸಕಾರಾತ್ಮಕವಾಗಿ ಸ್ಪಂದಿಸಿದ್ದಾರೆ. ರಾಜ್ಯದ ಬಹುತೇಕ ಬೇಡಿಕೆಗಳಿಗೆ ಇನ್ನು ಕೆಲವೇ ದಿನಗಳಲ್ಲಿ ಹಸಿರು ನಿಶಾನೆ ದೊರೆಯಲಿದೆ ಎಂಬ ವಿಶ್ವಾಸ ತಮ್ಮಲ್ಲಿದೆ. ರಾಜ್ಯದ ವಿವಿಧ ಯೋಜನಗೆಳ ಕುರಿತು ಅನುಮೋದನೆ ಹಾಗೂ ಮಂಜೂರಾತಿಗಾಗಿ ಕೇಂದ್ರದ ಹಲವು ಸಚಿವರನ್ನೂ ಕೂಡ ಖುದ್ದು ಭೇಟಿಯಾಗಿ ಮನವಿ ಸಲ್ಲಿಸಲಾಗಿದೆ. ಎಲ್ಲರೂ ಕೂಡ ರಾಜ್ಯದ ಅಭಿವೃದ್ಧಿ ಪ್ರಸ್ತಾವನೆಗಳಿಗೆ ಉತ್ತಮವಾಗಿ ಸ್ಪಂದಿಸಿದ್ದಾರೆ. ಈ ಹಿನ್ನೆಲೆಯಲ್ಲಿ ತಮ್ಮ ದೆಹಲಿ ಭೇಟಿ ಅತ್ಯಂತ ಯಶಸ್ವಿಯಾಗಿದೆ ಎಂದು ಯಡಿಯೂರಪ್ಪ ಬಣ್ಣಿಸಿದರು

    ಸಚಿವ ಸಂಪುಟ ವಿಸ್ತರಣೆಗೆ ರಾಷ್ಟ್ರೀಯ ಅಧ್ಯಕ್ಷರು ಹಾಗೂ ಪ್ರಧಾನಿ ನರೇಂದ್ರ ಮೋದಿ ಅನುಮೋದನೆ ನೀಡುವ ಸಾಧ್ಯತೆ ಇದೆ ಎನ್ನಲಾಗಿದೆ. ಈ ಬಗ್ಗೆ ವಿಶ್ವಾಸ ವ್ಯಕ್ತಪಡಿಸಿರುವ ಮುಖ್ಯಮಂತ್ರಿ ಯಡಿಯೂರಪ್ಪ ನಾಳೆ ಸಂಪುಟ ವಿಸ್ತರಣೆಗೆ ಸಿದ್ದತೆ ನಡೆಸಿದ್ದಾರೆ ಎನ್ನಲಾಗಿದೆ. ಸಂಪುಟಕ್ಕೆ ಐವರನ್ನು ಸೇರ್ಪಡೆಗೊಳಿಸಲು ತೀರ್ಮಾನಿಸಿದ್ದಾರೆ. ಎಂಟಿಬಿ ನಾಗರಾಜ್, ಆರ್.ಶಂಕರ್, ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ, ಎಚ್.ವಿಶ್ವನಾಥ್, ಸಿ.ಪಿ.ಯೋಗೀಶ್ವರ್ ಸಚಿವ ಸ್ಥಾನದ ಆಕಾಂಕ್ಷಿಗಳಾಗಿದ್ದಾರೆ. ಇವರಲ್ಲಿ ಯಾರಿಗೆ ಸಚಿವ ಸ್ಥಾನ ಲಭಿಸುತ್ತದೆ ಎಂಬುದನ್ನು ಕಾದು ನೋಡಬೇಕಿದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap