ನವದೆಹಲಿ:

ಜಮ್ಮು ಕಾಶ್ನೀರದಲ್ಲಿದ್ದ ಮೈತ್ರಿ ಸರ್ಕಾರ ಪತನವಾದ ನಂತರದಲ್ಲಿ ಕಳೆದ ಆರು ತಿಂಗಳಿಂದ ಚಾಲ್ತಿಯಲ್ಲಿದ್ದ ರಾಷ್ಟ್ರಪತಿ ಆಡಳಿತ ಜುಲೈ 3ರಂದು ಕೊನೆಗೊಳ್ಳಲಿದೆ ಅದನ್ನು ಮತ್ತೆ ಆರು ತಿಂಗಳವರೆಗೆ ವಿಸ್ತರಿಸುವಂತೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಶುಕ್ರವಾರ ಲೋಕಸಭೆಯಲ್ಲಿ ಶಾಸನಬದ್ಧ ನಿರ್ಣಯ ಮಂಡಿಸಿದ್ದಾರೆ.
ಲೋಕಸಭೆಯಲ್ಲಿ ಇಂದು ನಿರ್ಣಯ ಮಂಡಿಸಿದ ಅಮಿತ್ ಶಾ ಅಮರನಾಥ ಯಾತ್ರೆ ಮುಂದಿನ ತಿಂಗಳು ಇರುವುದರಿಂದ ರಾಜ್ಯದಲ್ಲಿ ಈಗ ಚುನಾವಣೆ ನಡೆಯಲು ಸಾಧ್ಯವಿಲ್ಲ. ಕೇಂದ್ರ ಚುನಾವಣಾ ಆಯೋಗ ಈ ವರ್ಷದ ಕೊನೆಗೆ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆಸಲು ನಿರ್ಧರಿಸಿದೆ ಎಂದು ಪ್ರಕಟಿಸಿದರು.ಕಳೆದ ಹಲವು ದಶಕಗಳಿಂದ ಈ ತಿಂಗಳುಗಳಲ್ಲಿ ಜಮ್ಮು-ಕಾಶ್ಮೀರದಲ್ಲಿ ಚುನಾವಣೆ ನಡೆದಿರಲಿಲ್ಲ ಎಂದು ಅಮಿತ್ ಶಾ ಹೇಳಿದರು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
