ನವದೆಹಲಿ
ಸುಪ್ರೀಂಕೋರ್ಟ್‌ನಲ್ಲಿ ಘಟಿಸುತ್ತಿರುವ ಇತ್ತೀಚಿನ ಬೆಳವಣಿಗೆಗಳನ್ನು ಗಮನದಲ್ಲಿರಿಸಿ ನ್ಯಾಯಾಂಗ ವ್ಯವಸ್ಥೆಯಲ್ಲಿಯೂ ಮೀಸಲಾತಿ ವ್ಯವಸ್ಥೆಯನ್ನು ತರಬೇಕೆನ್ನುವ ಕೂಗು ಕೇಳಿಬರುತ್ತಿದ್ದು.ಕೇಂದ್ರ ಸಚಿವ ರಾಮ್ ವಿಲಾಸ್ ಪಾಸ್ವಾನ್ ಹಾಗೂ ಸುಮಾರು 70ಕ್ಕೂ ಅಧಿಕ ಪರಿಶಿಷ್ಟ ಜಾತಿ ಹಾಗೂ ಪಂಗಡದ ಸಂಸದರು ನ್ಯಾಯಾಂಗದಲ್ಲಿಯೂ ಮೀಸಲಾತಿ ವ್ಯವಸ್ಥೆ ತರಬೇಕೆಂದು ಹಕ್ಕೊತ್ತಾಯ ಮಂಡಿಸಿದ್ದಾರೆ.
ಕೇಂದ್ರ ಆಹಾರ ಮತ್ತು ನಾಗರೀಕ ಪೂರೈಕೆ ಸಚಿವ ರಾಮ್‌ವಿಲಾಸ್ ಪಾಸ್ವಾನ್ ಮನೆಯಲ್ಲಿ ಫೆಬ್ರವರಿ 10ರಂದು ಈ ಸಂಬಂಧ ಸಭೆ ನಡೆದಿತ್ತು.