ರಾಂಚಿ
ಜೂನ್ ನಲ್ಲಿ ಉತ್ತರ ಭಾರತದಲ್ಲಿ ಸುದ್ದಿ ಮಾಡಿದ್ದ ತಬ್ರೇಝ್ ಅನ್ಸಾರಿ ಕೊಲೆ ಪ್ರಕರಣಕ್ಕೆ ಹೊಸ ತಿರುವು ಸಿಕ್ಕಿದೆ
ಪ್ರಕರಣಕ್ಕೆ ಸಂಬಂಧಿಸಿದಂತೆ 11 ಜನರ ಮೇಲೆ ಹೊರಿಸಲಾಗಿದ್ದ ಕ್ರಿಮಿನಲ್ ಪ್ರಕರಣವನ್ನು ಪೊಲೀಸರು ಕೈಬಿಟ್ಟಿದ್ದಾರೆ! ಅದಕ್ಕೆ ಕಾರಣ ಅಟಾಪ್ಸಿ ವರದಿ! ತಬ್ರೇಝ್ ಹೃದಯಾಘಾತದಿಂದ ಮರಣ ಹೊಂದಿದ್ದಾನೆಂದು ಅಟಾಪ್ಸಿ ವರದಿ ಹೇಳಿರುವುದ ರಿಂದ ಆತನನ್ನು ಹೊಡೆದು ಕೊಲ್ಲಲಾಗಿದೆ ಎಂಬ ಆರೋಪದಲ್ಲಿ ಹುರುಳಿಲ್ಲ ಎಂದು ಪ್ರಕರಣವನ್ನು ಕೈಬಿಡಲಾಗಿದೆ.
ಕಳೆದ ಜೂನ್ ತಿಂಗಳಿನಲ್ಲಿ 24 ವರ್ಷದ ಯುವಕ ತಬ್ರೇಜ್ ಜಮ್‌ಷೆಡ್ಪುರದಿಂದ ಸರೈಕೆಲಾ ಖರ್ಸವಾನ್ ಜಿಲ್ಲೆಯ ಕರ್ಸೋವಾದಲ್ಲಿರುವ ತನ್ನ ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ಹಲವು ಜನರಿದ್ದ ಗುಂಪೊಂದು ಅವರ ಮೇಲೆ ದಾಳಿ ಮಾಡಿತ್ತು. ದ್ವಿಚಕ್ರ ವಾಹನ ಕದ್ದಿದ್ದಾನೆ ಎಂದು ಆರೋಪಿಸಿ ಆತನನ್ನು ಕಂಬಕ್ಕೆ ಕಟ್ಟಿ ಹಿಂಸಿಸಲಾಗಿತ್ತು. ಕೆಲವು ಮೂಲಗಳ ಪ್ರಕಾರ ಆತನ ಬಳಿ ‘ಜೈ ಶ್ರೀರಾಮ್’ ಘೋಷಣೆ ಕೂಗುವಂತೆಯೂ ಒತ್ತಾಯಿಸಲಾಗಿತ್ತು.
ಹೊಡೆತ ಸಹಿಸಲಾಗದೆ ಪ್ರಜ್ಞೆ ಕಳೆದುಕೊಂಡಿದ್ದ ತಬ್ರೇಜ್ ನನ್ನು ಪೊಲೀಸರು ತಮ್ಮ ವಶಕ್ಕೆ ಪಡೆದಿದ್ದರು. ಆತನನ್ನು ನಾಲ್ಕು ದಿನದ ನಂತರ ಆಸ್ಪತ್ರೆಗೆ ಸೇರಿಸಲಾಯಿತಾದರೂ ವಿಳಂಬವಾಗಿದ್ದರಿಂದ ಆತ ಮೃತಪಟ್ಟಿದ್ದ.
ಆತನ ಮೇಲೆ ನಡೆದ ಹಲ್ಲೆಯಿಂದಾಗಿ ಆತ ಸಾವಿಗೀಡಾಗಿದ್ದಾನೆಂದು ಕುಟುಂಬ ಆರೋಪಿಸಿ, ಪ್ರಕರಣ ದಾಖಲಿಸಿದ್ದರಿಂದ ಹಲ್ಲೆ ನಡೆಸಿದ್ದ 11 ಜನರನ್ನು ಪೊಲೀಸರು ಬಂಧಿಸಿದ್ದರು. ಆದರೆ ಮರಣೋತ್ತರ ವರದಿಯಲ್ಲಿ ಆತ ಸತ್ತಿದ್ದು ಹೃದಯಾಘಾತದಿಂದ ಎಂದು ಉಲ್ಲೇಖವಾಗಿರುವುದರಿಂದ ಪ್ರಕರಣವನ್ನೇ ಕೈಬಿಡಲಾಗಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ