ಮಂಬೈ:
ದೇಶಾದ್ಯಂತ ತೀವ್ರ ಗಲಭೆಗೆ ಕಾರಣವಾಗಿರುವ ವಿವಾದಿತ ಪೌರತ್ವ ಕಾಯ್ದೆಯನ್ನು ಸಮರ್ಥಿಸಿಕೊಂಡಿರುವ ಮುಖ್ತಾರ್ ಅಬ್ಬಾಸ್ ನಖ್ವಿ ಅವರು ಈ ಕಾಯ್ದೆಯಿಂದ ಮುಸ್ಲಿಂ ಸಮುದಾಯಕ್ಕೆ ಯಾವುದೇ ಅಪಾಯವಿಲ್ಲ ಆದ್ದರಿಂದ ಕಾಯ್ದೆ ಹಿಂಪಡೆಯುವ ಮಾತೇ ಇಲ್ಲ ಎಂದು ತಿಳಿಸಿದ್ದಾರೆ.
ಪೌರತ್ವ ಕಾಯ್ದೆಯಿಂದ ಕೇಂದ್ರ ಸರ್ಕಾರ ಹಿಂದಕ್ಕೆ ಸರಿಯುವ ಮಾತೇ ಇಲ್ಲಾ. ಕಾಯ್ದೆ ಕುರಿತಂತೆ ದೇಶದಲ್ಲಿ ಗೊಂದಲ ಸೃಷ್ಟಿಸುತ್ತಿರುವವರು, ಅದರಿಂದ ಲಾಭ ಪಡೆಯಲು ಯತ್ನಿಸುತ್ತಿರುವವರು ಮೊದಲು ಇದನ್ನು ತಿಳಿಯಬೇಕಿದೆ. ಅಂತರ್ಗತ ಸಮಾಜ ನಿರ್ಮಾಣಕ್ಕೆ ಬಿಜೆಪಿ ಬದ್ಧವಾಗಿದೆ. ಕಾಯ್ದೆಯಿಂದ ದೇಶದ ಮುಸ್ಲಿಂ ಸಮುದಾಯಕ್ಕೆ ಯಾವ ರೀತಿಯಲ್ಲೂ ಅಪಾಯವಿಲ್ಲ ಎಂದು ಹೇಳಿದ್ದಾರೆ.
ಈ ಕಾಯ್ದೆಯು ಪಾಕಿಸ್ತಾನ, ಬಾಂಗ್ಲಾದೇಶ, ಆಫ್ಘಾನಿಸ್ತಾನದಿಂದ ಬಂದ ಹಿಂದೂಗಳೂ, ಸಿಖ್ಕರು, ಜೈನರು, ಪಾರ್ಸಿಗಳು, ಬೌದ್ಧರು ಹಾಗೂ ಕ್ರಿಶ್ಚಿಯನ್ನರಿಗೆ ಪೌರತ್ವವನ್ನು ನೀಡಲಿದೆ . ಕಾಯ್ದೆ ಭಾರತೀಯ ಪೌರತ್ವದ ಮೇಲೆ ಪರಿಣಾಮ ಬೀರುವುದಿಲ್ರ. ಸಂಸತ್ತಿನಲ್ಲೂ ಇದನ್ನು ಸ್ಪಷ್ಟವಾಗಿ ಹೇಳಿದ್ದೇವೆ. ಪೌರತ್ವ ಕಾಯ್ದೆ 1955ರ ಪ್ರಕಾರ ಭಾರತದಲ್ಲಿ ಯಾರೂ ಬೇಕಾದರೂ ಪೌರತ್ವ ಪಡೆಯಬಹುದಿತ್ತು . ಆದರೆ, ಪ್ರಸ್ತುತ ತಿದ್ದುಪಡಿ ಕಾಯ್ದೆ ಭಿನ್ನವಾಗಿದೆ.
ಕಳೆದ 5-6 ವರ್ಷಗಳಲ್ಲಿ 500ಕ್ಕೂ ಹೆಚ್ಚು ಮುಸ್ಲಿಮರು ಪೌರತ್ವವನ್ನು ಪಡೆದುಕೊಂಡಿದ್ದಾರೆ. ಮುಸ್ಲಿಮರು ಇಂದಿಗೂ ಪೌರತ್ವ ಪಡೆಯಲು ಬಯಸಿದ್ದೇ ಆದರೆ, ಈಗಲೂ ಸಿಗಲಿದೆ. ಆದರೆ, ಅದಕ್ಕೆ ಅದರದ್ದೇ ಆದ ಪ್ರಕ್ರಿಯೆಗಳಿರುತ್ತವೆ ಅದನ್ನು ಪೂರ್ಣಗೊಳಿಸಿದರೆ ಸಾಕು ಅವರಿಗೆ ಪೌರತ್ವ ದೊಎಯಲಿದೆ ಎಂದು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ
