1ವರ್ಷ ಹೊಸ ಯೋಜನೆಗಳ ಘೋಷಣೆ ಇಲ್ಲಾ : ನಿರ್ಮಲಾ ಸೀತಾರಾಮನ್

ನವದೆಹಲಿ:

   ದೇಶದಲ್ಲಿ ಕೊರೋನಾ ವೈರಸ್ ವ್ಯಾಪಕವಾಗಿ ಹರಡುತ್ತಿದ್ದು, ಈಗಾಗಲೇ ಆರ್ಥಿಕತೆಯ ಮೇಲೆ ಗಂಭೀರ ಪರಿಣಾಮ ಬೀರಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವರ್ಷದ ಕಾಲ ಯಾವುದೇ ರೀತಿಯ ಹೊಸ ಯೋಜನೆಗಳನ್ನು ಘೋಷಣೆ ಮಾಡುವುದಿಲ್ಲ ಎಂದು ಕೇಂದ್ರ ಸರ್ಕಾರ ಸ್ಪಷ್ಟಪಡಿಸಿದೆ. 

    ಈ ಕುರಿತು ಆದೇಶ ಹೊರಡಿಸಿರುವ ಕೇಂದ್ರ ವಿತ್ತ ಸಚಿವಾಲಯವು, ಕೊರೋನಾ ವೈರಸ್ ವಿರುದ್ಧದ ಹೋರಾಟಕ್ಕೆ ಸಂಪನ್ಮೂಲ ಕ್ರೋಡೀಕರಿಸಬೇಕಿದ್ದು, ಇದಕ್ಕೆ ಹೆಚ್ಚಿನ ಒತ್ತು ನೀಡಬೇಕಾಗಿದೆ. ಈ ಹಿನ್ನೆಲೆಯಲ್ಲಿ ಮುಂದಿನ ಒಂದು ವರ್ಷದ ಅವಧಿಗೆ ಕೇಂದ್ರ ಸರ್ಕಾರ ಯಾವುದೇ ಹೊಸ ಯೋಜನೆಯನ್ನು ಘೋಷಣೆ ಮಾಡುವುದಿಲ್ಲ ಎಂದು ಹೇಳಿದೆ. 

    ಹೊಸ ಯೋಜನೆಗಳಿಗೆ ಹಣಕಾಸು ಅನುಮೋದನೆ ಕೋರಿ ಕೇಂದ್ರ ಸರ್ಕಾರದ ಎಲ್ಲಾ ಸಚಿವಾಲಯಗಳು ಪ್ರಸ್ತಾವನೆ ಸಲ್ಲಿಸುವುದನ್ನು ನಿಲ್ಲಿಸಬೇಕು. ಕೊರೋನಾ ವೈರಸ್ ನೀಡಿರುವ ಆರ್ಥಿಕ ಹೊಡೆತದಿಂದ ತಪ್ಪಿಸಿಕೊಳ್ಳಲು ಈಗಾಗಲೇ ಕೇಂದ್ರ ಸರ್ಕಾರ ಜಾರಿಗೊಳಿಸಿರುವ ಆತ್ಮನಿರ್ಭರ ಭಾರತ ಅಭಿಯಾನಕ್ಕೆ ಮಾತ್ರ ಹಣಕಾಸಿನ ನೆರವು ಒದಗಿಸಲಾಗುತ್ತದೆ ಎಂದು ಸಚಿವಾಲಯ ತಿಳಿಸಿದೆ. 

 

ಹೆಚ್ಚುತ್ತಿರುವ ಖರ್ಚು

      ಖರ್ಚು ಹೆಚ್ಚುತ್ತಿರುವಾಗಲೂ ಸರ್ಕಾರ ಭಾರಿ ಸಂಪನ್ಮೂಲ ಬಿಕ್ಕಟ್ಟನ್ನು ಎದುರಿಸುತ್ತಿದೆ. ಕಂಟ್ರೋಲರ್ ಜನರಲ್ ಆಫ್ ಅಕೌಂಟ್ಸ್ (ಸಿಜಿಎ) ಪ್ರಕಾರ, ಏಪ್ರಿಲ್‌ನಲ್ಲಿ ಒಟ್ಟು ಆದಾಯದ ರಶೀದಿಗಳು, 27,548 ಕೋಟಿ, ಅಥವಾ ಬಜೆಟ್ ಅಂದಾಜಿನ 1.2 ಶೇಕಡಾ, ಆದರೆ ಒಟ್ಟು ಖರ್ಚು 3.07-ಲಕ್ಷ ಕೋಟಿ ಅಥವಾ ಬಜೆಟ್‌ನ ಶೇಕಡಾ 10 ರಷ್ಟಿದೆ ಎಂದು ಅಂದಾಜಿಸಲಾಗಿದೆ . ಇದರೊಂದಿಗೆ, ಹಣಕಾಸಿನ ಕೊರತೆಯ ಮೂರನೇ ಒಂದು ಭಾಗವು ಈಗಾಗಲೇ ಹಣಕಾಸಿನ ವರ್ಷದ ಮೊದಲ ತಿಂಗಳಲ್ಲಿ ಖಾಲಿಯಾಗಿದ್ದು . ಹೆಚ್ಚುವರಿಯಾಗಿ ಅವಶ್ಯಕತೆ ಇರುವ 4 ಲಕ್ಷ ಕೋಟಿಯಷ್ಟು ಮೊತ್ತವನ್ನು ಸಾಲ ಪಡೆಯಲು ಸರ್ಕಾರ ನಿರ್ಧರಿಸಿದೆ ಎಂದು ತಿಳಿಸಲಾಗಿದೆ.

     ಸರ್ಕಾರದ ವತಿಯಿಂದ ಘೋಷಣೆಯಾಗಿರುವ ಪ್ರಧಾನ ಮಂತ್ರಿ ಗರಿಬ್ ಕಲ್ಯಾಣ್ ಪ್ಯಾಕೇಜ್ ಮತ್ತು ಆತ್ಮನಿರ್ಭರ್ ಭಾರತ್ ಪ್ಯಾಕೇಜ್ ಅಡಿಯಲ್ಲಿ ಘೋಷಿಸಿರುವ ಪ್ರಕಟಣೆಗಳಲ್ಲಿ ಮಾತ್ರ ನಿಧಿ ಬಿಡುಗಡೆ ಮಾಡಲಾಗುವುದು ಎಂದಿದ್ದಾರೆ. ಈ ಹಣಕಾಸು ವರ್ಷದಲ್ಲಿ ಬೇರೆ ಯಾವುದೇ ಯೋಜನೆಗೆ ಅನುಮೋದನೆ ನೀಡಲಾಗುವುದಿಲ್ಲ ಎಂದು ಸಚಿವಾಲಯ ತಿಳಿಸಿದೆ.

      “COVID-19 ಸಾಂಕ್ರಾಮಿಕದ ಹಿನ್ನೆಲೆಯಲ್ಲಿ, ಸಾರ್ವಜನಿಕ ಹಣಕಾಸು ಸಂಪನ್ಮೂಲಗಳ ಕ್ರೌಡೀಕರಣಕ್ಕೆ ಒತ್ತು ನೀಡಲಾಗಿದ್ದು  ಉದಯೋನ್ಮುಖ ಮತ್ತು ಬದಲಾಗುತ್ತಿರುವ ಆದ್ಯತೆಗಳಿಗೆ ಅನುಗುಣವಾಗಿ ಸಂಪನ್ಮೂಲಗಳನ್ನು ವಿವೇಕಯು ತವಾಗಿ ಬಳಸಿಕೊಳ್ಳುವ ಅವಶ್ಯಕತೆಯಿದೆ” ಎಂದು ಹಣಕಾಸು ಸಚಿವಾಲಯ ತನ್ನ ಪ್ರಕಟಣೆಯಲ್ಲಿ ತಿಳಿಸಿದೆ.ಬಜೆಟ್ ಅಡಿಯಲ್ಲಿ ಈಗಾಗಲೇ ಅನುಮೋದಿಸಲಾದ ಯೋಜನೆಗಳು ಮಾರ್ಚ್ 31 ರವರೆಗೆ ಸ್ಥಗಿತಗೊಳಿಸಲಾಗಿದೆ ಎಂದಿದ್ದಾರೆ .

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap