ಚಂದೀಗಢ
ಮಾಜಿ ಪ್ರಧಾನ ಮಂತ್ರಿ ದಿವಂಗತ ಶ್ರೀ ಐಕೆ ಗುಜರಾಲ್ ಅವರ 100ನೇ ಜನ್ಮ ದಿನೋತ್ಸವದ ಅಂಗವಾಗಿ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಶಿರೋಮಣಿ ಅಕಾಲಿ ದಳದ ಅಧ್ಯಕ್ಷ ಸುಖಬೀರ್ ಸಿಂಗ್ ಅವರು ಮಾಜಿ ಪ್ರಧಾನಿ ರಾಜೀವ್ ಗಾಂಧಿ ಅವರಿಗೆ ನೀಡಿದ ದೇಶದ ಅತ್ಯುನ್ನತ ನಾಗರಿಕ ಗೌರವ ಭಾರತರತ್ನವನ್ನು ಹಿಂಪಡೆಯುವಂತೆ ಆಗ್ರಹಿಸಿದ್ದಾರೆ.
1991ರಲ್ಲಿ ಮರಣೋತ್ತರವಾಗಿ ರಾಜೀವ್ ಗಾಂಧಿ ಅವರಿಗೆ ಭಾರತರತ್ನ ನೀಡಲಾಗಿದೆ. ಆದರೆ, ಸಿಖ್ ಹತ್ಯಾಕಾಂಡಕ್ಕೆ ರಾಜೀವ್ ಗಾಂಧಿ ಆದೇಶ ನೀಡಿದ್ದರು ಎಂಬ ಆರೋಪವಿದೆ. ಮಾಜಿ ಪ್ರಧಾನಿ ಐ.ಕೆ.ಗುಜ್ರಾಲ್ ಅವರ 100 ನೇ ಜನ್ಮದಿನೋತ್ಸವದ ಅಂಗವಾಗಿ ಆಯೋಜಿಸಲಾಗಿದ್ದ ಕಾರ್ಯಕ್ರಮದಲ್ಲಿ ಮಾತನಾಡಿದ ಮಾಜಿ ಪ್ರಧಾನಿ ಮನಮೋಹನ್ ಸಿಂಗ್, ‘ಐ.ಕೆ.ಗುಜ್ರಾಲ್ ನೀಡಿದ್ದ ಸಲಹೆಯನ್ನು ಒಪ್ಪಿದ್ದರೆ ಸಿಖ್ ಮಾರಣಹೋಮವನ್ನು ತಡೆಯಬಹುದಾಗಿತ್ತು’ ಎಂದು ಹೇಳಿದ್ದನ್ನು ಬಾದಲ್ ಉಲ್ಲೇಖಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ