ನವದೆಹಲಿ
ಕರ್ನಾಟಕದ ಕನಸಿನ ಕೂಸಾದ ಮೇಕೆದಾಟು ಯೋಜನೆಗೆ ತಮಿಳುನಾಡು ಸರ್ಕಾರ ಮತ್ತೆ ಕೇಂದ್ರ ಸರ್ಕಾರದ ಮುಂದೆ ತಕರಾರು ತೆಗೆದಿದೆ.ಈ ಹಿಂದೆ ಕರ್ನಾಟಕ ಸರ್ಕಾರ ಯೋಜನೆ ಕುರಿತು ಸಲ್ಲಿಸಿರುವ ಡಿಪಿಆರ್ ವರದಿಯನ್ನು ತಿರಸ್ಕಾರ ಮಾಡಬೇಕು ಎಂದು ಮನವಿ ಮಾಡಿದೆ.
ಕೆ. ಪಳನಿಸ್ವಾಮಿ ಕೇಂದ್ರ ಪರಿಸರ ಖಾತೆ ಸಚಿವ ಪ್ರಕಾಶ್ ಜಾವಡೇಕರ್ ಅವರಿಗೆ ಪತ್ರ ಬರೆದಿದ್ದಾರೆ ಮತ್ತು ಮೇಕೆದಾಟು ಯೋಜನೆಗೆ ಒಪ್ಪಿಗೆ ನೀಡಬಾರದು ಎಂದು ಪತ್ರದಲ್ಲಿ ಉಲ್ಲೇಖಿಸಿದ್ದಾರೆ ಎನ್ನಲಾಗಿದೆ.
ಮೇಕೆದಾಟು ಯೋಜನೆ ಕಾವೇರಿ ನ್ಯಾಯಾಧೀಕರಣ ಮತ್ತು ಸುಪ್ರೀಂಕೋರ್ಟ್ ನೀಡಿದ ತೀರ್ಪಿನ ಉಲ್ಲಂಘನೆಯಾಗಲಿದೆ ಎಂದು ಪತ್ರದಲ್ಲಿ ತಿಳಿಸಿದ್ದಾರೆ. ಕೇರಳ ಸರ್ಕಾರ ಸಹ ಯೋಜನೆಗೆ ವಿರೋಧ ವ್ಯಕ್ತಪಡಿಸಿದೆ ಎಂದು ಪತ್ರದಲ್ಲಿ ಹೇಳಿದ್ದಾರೆ.
