ನವದೆಹಲಿ:
ಸಾರ್ವಜನಿಕ ಸ್ಥಳಗಳನ್ನು ಪ್ರತಿಭಟನೆಗಳಿಗೆ ಅನಿರ್ದಿಷ್ಟಾವಧಿಗೆ ಬಳಸಿಕೊಳ್ಳುವ ಹಾಗಿಲ್ಲ ಎಂದು ಸುಪ್ರೀಂ ಕೋರ್ಟ್ ಸೋಮವಾರ ತೀರ್ಪು ನೀಡಿದೆ.
ನಾಗರಿಕ (ತಿದ್ದುಪಡಿ) ಮಸೂದೆ ವಿರೋಧಿಸಿ ಕಳೆದ ವರ್ಷ ಡಿಸೆಂಬರ್ 14ರಂದು ಶಾಹೀನ್ ಬಾಗ್ ನಲ್ಲಿ ತೀವ್ರ ಪ್ರತಿಭಟನೆ ಆರಂಭವಾಗಿತ್ತು. ನಂತರ ಕೋವಿಡ್-19 ಹಿನ್ನೆಲೆಯಲ್ಲಿ ದೇಶಾದ್ಯಂತ ಲಾಕ್ ಡೌನ್ ಮಾರ್ಚ್ 24ರಂದು ಘೋಷಣೆಯಾದ ನಂತರ ಪ್ರತಿಭಟನೆ ಹಿಂತೆಗೆದುಕೊಳ್ಳಲಾಗಿತ್ತು. ಡಿಸೆಂಬರ್ ಗಿಂತಲೂ ಮೊದಲೇ ಇಲ್ಲಿ ಪ್ರತಿಭಟನೆ ಆರಂಭವಾಗಿ ಸಾರ್ವಜನಿಕ ಓಡಾಟದ ಸ್ಥಳ ಶಾಹೀನ್ ಬಾಗ್ ನ್ನು ಸಂಚಾರಕ್ಕೆ ನಿರ್ಬಂಧಿಸಲಾಗಿತ್ತು. ಇದರಿಂದ ಜನರಿಗೆ ಓಡಾಟಕ್ಕೆ ತೀವ್ರ ತೊಂದರೆಯಾಗಿತ್ತು.