ವಿಶ್ವಾಸ ಗೆದ್ದ ಉದ್ದವ್ ಠಾಕ್ರೆ..!

ಮುಂಬೈ

        ಎನ್‌ಸಿಪಿ-ಶಿವಸೇನಾ-ಕಾಂಗ್ರೆಸ್‌ ನ ತ್ರಿಮೈತ್ರಿ ಸರ್ಕಾರ ಶನಿವಾರ ಬಹುಮತ  ಅಗ್ನಿಪರೀಕ್ಷೆ ಎದುರಿಸಿ ಅದರಲ್ಲಿ 169 ಶಾಸಕರ ಬಹುಮತ  ಪಡೆದು ಸರ್ಕಾರ ಸ್ಥಾಪನೆ ಮಾಡಿದೆ. ಗುರುವಾರವಷ್ಟೆ ಮಹಾರಾಷ್ಟ್ರ ಮುಖ್ಯಮಂತ್ರಿಯಾಗಿ ಶಿವಸೇನಾ ಮುಖಂಡ ಉದ್ಧವ್ ಠಾಕ್ರೆ ಅವರು ಪ್ರಮಾಣ ವಚನ ಸ್ವೀಕರಿಸಿದ್ದರು  ಇಂದು ವಿಧಾನಸಭೆಯಲ್ಲಿ ವಿಶ್ವಾಸಮತ ಯಾಚನೆ ಮಾಡಿ ಜಯಿಸಿದ್ದಾರೆ ಇನ್ನೂ 5 ವರ್ಷಗಳ ಕಾಲ ಸ್ಥಿರ ಸರ್ಕಾರ ನೀಡುವ ಭರವಸೆ ನೀಡಿದ್ದಾರೆ.

      ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್ ಸೇರಿ ಮೂರು ಪಕ್ಷಗಳ ಶಾಸಕರ ಸಂಖ್ಯೆ 154. ವಿಶ್ವಾಸಮತ ಯಾಚನೆ ವೇಳೆ ಬಹುಜನ್ ವಿಕಾಸ್ ಅಘಾಡಿ ಮತ್ತು ಪಕ್ಷೇತರರು ಕೆಲವು ಶಾಸಕರು ಉದ್ಧವ್ ಠಾಕ್ರೆಗೆ ಬೆಂಬಲ ನೀಡಿದ್ದಾರೆ .ವಿಶ್ವಾಸಮತ ಯಾಚನೆ ಪ್ರಕ್ರಿಯೆಗೂ ಮೊದಲು ಮಾಜಿ ಸಿಎಂ ದೇವೇಂದ್ರ ಫಡ್ನವೀಸ್ ನೇತೃತ್ವದಲ್ಲಿ 105 ಬಿಜೆಪಿ ಶಾಸಕರು ಕಲಾಪದಿಂದ ಹೊರನಡೆದಿದ್ದರು.

      ವಿಶ್ವಾಸಮತ ಯಾಚನೆ ಪ್ರಕ್ರಿಯೆಗೂ ಮೊದಲು ಹಂಗಾಮಿ ಸ್ಪೀಕರ್ ಕಾಳಿದಾಸ್ ಅವರನ್ನು ಬದಲಿಸಿ ಕಾಂಗ್ರೆಸ್ ನ ದಿಲೀಪ್ ಪಾಟೀಲ್ ಅವರನ್ನು ನೇಮಕ ಮಾಡಿರುವುದಕ್ಕೆ ಬಿಜೆಪಿ ತೀವ್ರ ಆಕ್ರೋಶ ವ್ಯಕ್ತಪಡಿಸಿತ್ತು. ಈ ಸಂದರ್ಭದಲ್ಲಿ ಪ್ರೋ ಟೆಮ್ ಸ್ಪೀಕರ್ ದಿಲೀಪ್ ಪಾಟೀಲ್, ಗದ್ದಲ ನಡೆಸದಂತೆ ಮನವಿ ಮಾಡಿಕೊಂಡರು.

     ನಿಯಮಾವಳಿ ಪ್ರಕಾರ ಮಹಾರಾಷ್ಟ್ರ ವಿಧಾನಸಭೆಯ ವಿಶೇಷ ಅಧಿವೇಶನ ಕರೆದಿಲ್ಲ ಎಂದು ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಪ್ರಮಾಣವಚನ ಸಮರ್ಪಕವಾಗಿ ತೆಗೆದುಕೊಂಡಿಲ್ಲ ಎಂದು ಮಾಜಿ ಸಿಎಂ ಫಡ್ನವೀಸ್ ಆಕ್ರೋಶ ವ್ಯಕ್ತಪಡಿಸಿದರು. ವಂದೇ ಮಾತರಂನಿಂದ ಅಧಿವೇಶನ ಆರಂಭವಾಗಬೇಕಿತ್ತು. ಆದರೆ ನಿಯಮಗಳನ್ನು ಗಾಳಿಗೆ ತೂರಿ ಅಧಿವೇಶನ ಕರೆಯಲಾಗಿದೆ ಎಂದು ಆರೋಪಿಸಿದರು.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link