ರಾಮ ಮಂದಿರ ಶಿಲಾನ್ಯಾಸ: ಉದ್ಧವ್ ಠಾಕ್ರೆ ಗೈರು ಸಾಧ್ಯತೆ

ಮುಂಬೈ

    ರಾಮ ಮಂದಿರ ಭೂಮಿಪೂಜೆ ಕಾರ್ಯಕ್ರಮಕ್ಕೆ ಮಹಾರಾಷ್ಟ್ರ ಸಿಎಂ, ಶಿವಸೇನೆ ಮುಖ್ಯಸ್ಥ ಉದ್ಧವ್ ಠಾಕ್ರೆ ಗೈರಾಗುವ ಸಾಧ್ಯತೆಗಳು ದಟ್ಟವಾಗಿದೆ. 

   ಆ.05 ರಂದು ನಡೆಯಲಿರುವ ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ ಭಾಗಿಯಾಗುವ ನಿರೀಕ್ಷೆ ಇದೆ. ಅಯೋಧ್ಯೆಯಲ್ಲಿ ಕೋವಿಡ್-19 ಪರಿಸ್ಥಿತಿ ಗಂಭೀರವಾಗಿರುವ ಕಾರಣದಿಂದಾಗಿ ಉದ್ಧವ್ ಠಾಕ್ರೆ ಕಾರ್ಯಕ್ರಮದಲ್ಲಿ ಭಾಗಿಯಾಗುವ ಸಾಧ್ಯತೆ ಕಡಿಮೆ ಎಂದು ಶಿವಸೇನೆ ನಾಯಕ ಸಂಜಯ್ ರೌತ್ ಹೇಳಿದ್ದಾರೆ. 

    ಪ್ರಧಾನಿ ನರೇಂದ್ರ ಮೋದಿ ಅವರು ಕಾರ್ಯಕ್ರಮದಲ್ಲಿ ಭಾಗಿಯಾಗುವುದು ಮುಖ್ಯ. ಮುಖ್ಯಮಂತ್ರಿಯಾಗಿರುವ ಉದ್ಧವ್ ಠಾಕ್ರೆ ಯಾವಾಗ ಬೇಕಾದರೂ ಅಯೋಧ್ಯೆಗೆ ಭೇಟಿ ನೀಡಬಹುದು ಎಂದು ಹೇಳಿರುವ ಸಂಜಯ್ ರೌತ್ ಶಿವಸೇನೆ ಪಕ್ಷ 1 ಕೋಟಿ ರೂಪಾಯಿ ರಾಮಮಂದಿರ ನಿರ್ಮಾಣಕ್ಕೆ ದೇಣಿಗೆ ನೀಡಿರುವುದನ್ನು ತಿಳಿಸಿದ್ದಾರೆ

Recent Articles

spot_img

Related Stories

Share via
Copy link