ತೆಲುಗು ನಟನ ಫಾರ್ಮ್ ಹೌಸ್ ನಲ್ಲಿ ಅಪರಿಚಿತ ಶವ ಪತ್ತೆ..!

ತೆಲಂಗಾಣ :

   ತೆಲುಗಿನ ಪ್ರಸಿದ್ಧ ನಟರಲ್ಲಿ ಒಬ್ಬರಾದ ಅಕ್ಕಿನೇನಿ ನಾಗಾರ್ಜುನ ಅವರ ಒಡೆತನ ಫಾರ್ಮ್ ಹೌಸಿನ ಶೆಡ್ ವೊಂದರಲ್ಲಿ ಅಪರಿಚಿತ ವ್ಯಕ್ತಿಯ ಶವ ಪತ್ತೆಯಾಗಿದೆ.

   ನಾಗಾರ್ಜುನ ಅವರಿಗೆ ಸೇರಿದ ಕೃಷಿ ಭೂಮಿಗೆ ಹೊಂದಿಕೊಂಡಂತೆ ಕೂಲಿ ಕಾರ್ಮಿಕರು ಇರಲೆಂದು ಕಟ್ಟಿರುವ ಶೆಡ್ ಒಂದರಲ್ಲಿ ಅಪರಿಚಿತ ವ್ಯಕ್ತಿಯ ಶವ ಕೊಳೆತ ಸ್ಥಿತಿಯಲ್ಲಿ ಪತ್ತೆಯಾಗಿದೆ. ಸುಮಾರು 6 ತಿಂಗಳ ಹಿಂದೆ ಸಾವು ಸಂಭವಿಸಿರಬಹುದು ಎಂದು ಪೊಲೀಸರು ಶಂಕೆ ವ್ಯಕ್ತಪಡಿಸಿದ್ದಾರೆ.

   ಈ ವಿಚಾರವಾಗಿ ಪ್ರಕರಣ ದಾಖಲಿಸಿಕೊಂಡಿರುವ ಪೊಲೀಸರು ತನಿಖೆ ಮುಂದುವರೆಸಿದ್ದಾರೆ. “ಈ ಬಗ್ಗೆ ಪ್ರತಿಕ್ರಿಯಿಸಿದ ಪೊಲೀಸರು ಕ್ಷೇಮಂಪೇಟ್ ಪೊಲೀಸ್ ಠಾಣೆ ವ್ಯಾಪ್ತಿಯ ಪಾಪಿರೆಡ್ಡಿ ಗ್ರಾಮದಲ್ಲಿ ಈ ಘಟನೆ ಸಂಭವಿಸಿದ್ದು, ನಾಗಾರ್ಜುನ ಅವರಿಗೆ ಸೇರಿದ ಈ ಕೃಷಿಭೂಮಿ ಅನೇಕ ತಿಂಗಳುಗಳಿಂದ ಖಾಲಿ ಬಿದ್ದಿತ್ತು. ಹಾಗಾಗಿ ಇಲ್ಲಿ ಯಾರೂ ಅಷ್ಟಾಗಿ ಸುಳಿದಾಡಿದ ಗುರುತು ಗಳಿಲ್ಲ . ಮೃತ ವ್ಯಕ್ತಿಯ ಗುರುತು ಪತ್ತೆ ಇನ್ನೂ ಆಗಿಲ್ಲ. ಸ್ಥಳೀಯ ಪೊಲೀಸ್ ಠಾಣೆ ಸೇರಿದಂತೆ ಈ ವ್ಯಾಪ್ತಿಯ ಎಲ್ಲಾ ಊರುಗಳಲ್ಲಿ ಈ ಬಗ್ಗೆ ಹುಡುಕಾಟ ನಡೆಸುತ್ತಿದ್ದೇವೆ ಎಂದು ತಿಳಿಸಿದ್ದಾರೆ.

 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link