ದೆಹಲಿ :
ಕೇಂದ್ರ ಸಚಿವೆ ನಿರ್ಮಲಾ ಸೀತಾರಾಮನ್ ಆದಾಯ ತೆರಿಗೆ ಪಾವತಿದಾರರಿಗೆ ಬಂಪರ್ ಸುದ್ದಿ ನೀಡಿದ್ದು, 5 ಲಕ್ಷ ರೂಪಾಯಿವರೆಗೆ ಆದಾಯ ತೆರಿಗೆ ವಿನಾಯ್ತಿ ನೀಡಲಾಗಿದೆ.
ಕೇಂದ್ರ ಹಣಕಾಸು ಸಚಿವೆ ನಿರ್ಮಲ ಸೀತಾರಾಮನ್ ಇಂದು ಲೋಕಸಭೆಯಲ್ಲಿ ತಮ್ಮ ಚೊಚ್ಚಲ ಬಜೆಟ್ ಮಂಡನೆ ಮಾಡಿದ್ದು, ಅದರಲ್ಲಿ ತೆರಿಗೆದಾರರಿಗೆ ಉತ್ತೇಜನ ನೀಡಲು ಹಲವು ಕ್ರಮಗಳನ್ನು ಕೈಗೊಳ್ಳಲಾಗಿದೆ.
5 ಲಕ್ಷ ವರಮಾನ ಹೊಂದಿರುವವರು ಯಾವುದೇ ರೀತಿಯ ತೆರಿಗೆಯನ್ನು ಪಾವತಿಸಬೇಕಿಲ್ಲ. ಈ ಬಾರಿ ನಾವು ಜನರಿಗೆ ಹೊರೆಯಾಗದಂತೆ ತೆರಿಗೆಯನ್ನು ಸಹ ವಿಧಿಸುವುದಿಲ್ಲ ಎಂದು ತಿಳಿಸಿದ್ದಾರೆ.
ತೆರಿಗೆ ಪಾವತಿದಾರರಿಗೆ 5 ಲಕ್ಷ ರೂಪಾಯಿವರೆಗೆ ಆದಾಯ ತೆರಿಗೆ ವಿನಾಯ್ತಿ ನೀಡಲಾಗಿದ್ದು, ಜೊತೆಗೆ 1.50 ಲಕ್ಷ ರೂಪಾಯಿಗಳವರೆಗಿನ ಸಾಲಕ್ಕೆ ತೆರಿಗೆ ವಿನಾಯಿತಿ ನೀಡಲಾಗಿದೆ. ನೇರ ತೆರಿಗೆ ಕಟ್ಟುವವರ ಸಂಖ್ಯೆ 11 ಕೋಟಿ ಇದ್ದು, ಕಳೆದ ಸಾಲಿಗಿಂತ ಶೇ.78ರಷ್ಟು ಹೆಚ್ಚಾಗಿದೆ. ವಾರ್ಷಿಕ 400 ಕೋಟಿ ವಹಿವಾಟು ನಡೆಸುವ ಉದ್ದಿಮೆದಾರರಿಗೆ ಶೇ.25ರಷ್ಟು ತೆರಿಗೆಯನ್ನು ವಿಧಿಸಲಾಗುವುದು ಎಂದು ಅವರು ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ