ಉನ್ನಾವ್ ರೇಪ್ ಕೇಸ್ : ತ್ವರಿತ ಇತ್ಯರ್ಥಕ್ಕೆ ಕ್ರಮ : ಸಿಎಂ

ಲಕ್ನೊ:

     ಉತ್ತರ ಪ್ರದೇಶದಲ್ಲಿ ತೀವ್ರ ಚರ್ಚೆಗೆ ಗ್ರಾಸವಾಗಿದ್ದ ಉನ್ನಾವ್ ಗ್ಯಾಂಗ್ ರೇಪ್ ಪ್ರಕರಣಕ್ಕೆ ಸಂಬಂಧಿಸಿದಂತೆ ಸಾಕ್ಷಿ ನೀಡಲೆಂದು ಕೋರ್ಟ್ ಗೆ ಬರುವ ಸಂದರ್ಭದಲ್ಲಿ ಸಂತ್ರಸ್ಥೆಯನ್ನು ಬೆಂಕಿ ಹಾಕಿ ಸುಟ್ಟಿರುವ ಘಟನೆ ಗೆ ಸಂಬಂಧಿಸಿದಂತೆ ಉ.ಪ್ರದೇಶ ಮುಖ್ಯಮಂತ್ರಿ ಇಂದು ಮಾತನಾಡಿದ್ದು ಪ್ರಕರಣದ ತ್ವರಿತ ಇತ್ಯರ್ಥಕ್ಕೆ ಸೂಕ್ತ ಕ್ರಮ ಕೈಗೊಳ್ಳುವುದಾಗಿ ಹೇಳಿದ್ದಾರೆ.

     ಸಂತ್ರಸ್ತೆಯ ಸಾವು ಅತ್ಯಂತ ದುಃಖಕರ ವಿಷಯವಾಗಿದ್ದು ಅವರ ಕುಟುಂಬದವರಿಗೆ ದುಃಖವನ್ನು ಭರಿಸುವ ಶಕ್ತಿ ಸಿಗಲಿ ಎಂದು ಉತ್ತರ ಪ್ರದೇಶ ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್ ಸಂತಾಪ ಸೂಚಿಸಿದ್ದಾರೆ.ಎಲ್ಲಾ ಆರೋಪಿ ಗಳನ್ನು ಬಂಧಿಸಲಾಗಿದೆ. ಕೇಸು ತ್ವರಿತ ನ್ಯಾಯಾಲಯದಲ್ಲಿ ವಿಚಾರಣೆ ನಡೆದು ಶಿಕ್ಷೆ ವಿಧಿಸಲಾಗುವುದು ಎಂದು ಸಿಎಂ ತಿಳಿಸಿದ್ದಾರೆ.

     ಬೆಂಕಿಯಿಂದ ತೀವ್ರವಾಗಿ ಸುಟ್ಟು ಸಾವು ಬದುಕಿನ ನಡುವೆ ಹೋರಾಟ ನಡೆಸುತ್ತಿದ್ದ ಸಂತ್ರಸ್ತೆಯನ್ನು ದೆಹಲಿಯ ಸಫ್ದರ್ಜಂಗ್ ಆಸ್ಪತ್ರೆಗೆ ಏರ್ ಲಿಫ್ಟ್ ಮೂಲಕ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಇಂದು ಬೆಳಗ್ಗೆ ಅಸುನೀಗಿದ್ದಾರೆ.ಈ ವಿಷಯವಾಗಿ ಸಂತ್ರಸ್ಥೆಗೆ ನ್ಯಾಯ ಒದಗಿಸುವಂತೆ ರಾಜ್ಯಾದ್ಯಂತ ಪ್ರತಿಭಟನೆ ನಡೆಯುತ್ತಿರುವ ಬಗ್ಗೆ ವರದಿಯಾಗಿದೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ