ವಾಷಿಂಗ್ಟನ್:
ದೆಹಲಿಯಲ್ಲಿ ನಡೆಯುತ್ತಿರುವ ಪೌರತ್ವ ತಿದ್ದುಪಡಿ ಕಾಯ್ದೆ ಪರ-ವಿರೋಧಿ ಬಣಗಳ ನಡುವಿನ ಹಿಂಸಾಚಾರವನ್ನು ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ ತೀವ್ರವಾಗಿ ಖಂಡಿಸಿದೆ.
ದೆಹಲಿಯಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಬಗ್ಗೆ ಅಮೆರಿಕದ ಅಂತಾರಾಷ್ಟ್ರೀಯ ಧಾರ್ಮಿಕ ಸ್ವಾತಂತ್ರ್ಯ ಆಯೋಗ ತೀವ್ರ ಕಳವಳ ವ್ಯಕ್ತಪಡಿಸಿದೆ. ಈ ಕುರಿತಂತೆ ಪ್ರಕಟಣೆ ಹೊರಡಿಸಿರುವ ಯುಎಸ್ ಸಿಐಆರ್ ಎಫ್ ಆಯುಕ್ತರಾದ ಅನುರಿಮಾ ಭಾರ್ಗವ ಅವರು, ದೆಹಲಿ ಹಿಂಸಾಚಾರವನ್ನು ಕ್ರೂರ ಮತ್ತು ಪರೀಕ್ಷಿಸದ ಹಿಂಸಾಚಾರ ಎಂದು ಹೇಳಿದ್ದಾರೆ. ಅಲ್ಲದೆ ಹಿಂಸಾಚಾರಕ್ಕೆ ಸಂಬಂಧಿಸಿದಂತೆ ಭಾರತ ಸರ್ಕಾರ ಕೂಡಲೇ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಳ್ಳಬೇಕು. ಆ ಮೂಲಕ ಅಮಾಯಕ ಪ್ರಜೆಗಳ ರಕ್ಷಣೆ ಮಾಡಬೇಕು ಎಂದು ಹೇಳಿದ್ದಾರೆ.
ಇದೇ ವೇಳೆ ದೆಹಲಿ ಪೊಲೀಸರ ವಿರುದ್ಧವೂ ಕಿಡಿಕಾರಿರುವ ಅನುರಿಮಾ ಭಾರ್ಗವ ಅವರು, ಅಲ್ಪಸಂಖ್ಯಾತರ ವಿರುದ್ಧದ ದಾಳಿಯನ್ನು ತಡೆಯುವಲ್ಲಿ ದೆಹಲಿ ಪೊಲೀಸರು ವಿಫಲರಾಗಿದ್ದಾರೆ. ಸರ್ಕಾರ ಕೂಡ ನಾಗರಿಕರ ರಕ್ಷಣೆ ಮಾಡುವಲ್ಲಿ ವಿಫಲವಾಗಿದೆ. ಹೀಗಾಗಿ ಇದು ಅಂತಾರಾಷ್ಟ್ರೀಯ ಮಾನವ ಹಕ್ಕುಗಳ ಸ್ಪಷ್ಟ ಉಲ್ಲಂಘನೆ ಎಂದು ಭಾವಿಸಬೇಕಾಗುತ್ತದೆ ಎಂದು ಹೇಳಿದ್ದಾರೆ
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
