ನವದೆಹಲಿ: 

ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ 18 ವಾಹನಗಳಿಗೆ ಬೆಂಕಿ ಹಚ್ಚಿದ ಘಟನೆ ದಕ್ಷಿಣ ದೆಹಲಿಯ ಮದಂಗೀರ್ ನಲ್ಲಿ ನಡೆದಿದೆ ಈ ಸಂಬಂಧ ಪೊಲೀಸರು ದೂರು ದಾಖಲಿಸಿದ್ದಾರೆ.
@DelhiPolice on the lookout for this man who set more than a dozen vehicles on fire a night before Diwali in south Delhi. @TOIDelhi pic.twitter.com/2sQ4bfzEiQ
— Sidharth Bhardwaj (@SidharthTOI) November 7, 2018
ಪೆಟ್ರೋಲ್ ಪೈಪ್ ತೆರೆದು ಬೆಂಕಿ ಹಚ್ಚುವ ವಿಡಿಯೋ ಸಿಸಿಟಿವಿಯಲ್ಲಿ ದಾಖಲಾಗಿದೆ,ಆರು ಮೋಟಾರ್ ಸೈಕಲ್ ಗಳ ಮೇಲೆ ಪೆಟ್ರೋಲ್ ಸುರಿದು ಬೆಂಕಿ ಹಚ್ಚಿದ್ದಾನೆ ಎಂದು ತಿಳಿದು ಬಂದಿದೆ. ಬೆಂಕಿ ತನ್ನ ಕೆನ್ನಾಲಿಗೆಗೆ ಪಕ್ಕದಲ್ಲಿ ನಿಲ್ಲಿಸಿದ್ದ ಕಾರುಗಳು ಸಹ ಆಹುತಿಯಾಗಿವೆ ಎಂದು ಹೇಳಲಾಗಿದೆ
ಘಟನಾ ಸ್ಥಳಕ್ಕೆ ಆಗಮಿಸಿದ ಪೊಲೀಸರು ಮಾಹಿತಿ ಪಡೆದಿದ್ದಾರೆ, ಆದರೆ ಆರೋಪಿ ಸ್ಥಳದಿಂದ ಪರಾರಿಯಾಗಿದ್ದು. ಬೆಂಕಿಗೆ 8 ದ್ವಿಚಕ್ರ ವಾಹನ ಹಾಗೂ 2 ಕಾರುಗಳು ಸಂಪೂರ್ಣ ಭಸ್ಮವಾಗಿವೆ, ಆರು ಮೋಟಾರ್ ಸೈಕಲ್ ಮತ್ತು ಎರಡು ಕಾರುಗಳು ಭಾಗಶಃ ಸುಟ್ಟು ಹೋಗಿವೆ ಎಂದು ಪೊಲೀಸರು ತಮ್ಮ ವರದಿಯಲ್ಲಿ ತಿಳಿಸಿದ್ದಾರೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ
