ನವದೆಹಲಿ
ಆಮ್ ಆದ್ಮಿ ಪಕ್ಷ (ಎಎಪಿ), ಮುಂಬರುವ ಹರಿಯಾಣ ವಿಧಾನಸಭಾ ಚುನಾವಣೆಯಲ್ಲಿ ತನ್ನ ಮಿತ್ರ ಪಕ್ಷವಾದ ಜನ್ನಾಯಕ್ ಜನತಾ ಪಕ್ಷ (ಜೆಜೆಪಿ) ಜೊತೆ ಮೈತ್ರಿ ಸಾಧ್ಯತೆಯನ್ನು ತಳ್ಳಿ ಹಾಕಿದ್ದು, ಏಕಾಂಗಿಯಾಗಿ ಸ್ಪರ್ಧಿಸುವುದಾಗಿ ಬುಧವಾರ ಘೋಷಿಸಿದೆ.
ಸುದ್ದಿಗಾರರೊಂದಿಗೆ ಮಾತನಾಡಿದ ಆಪ್ ಹಿರಿಯ ಮುಖಂಡ ಗೋಪಾಲ್ ರೈ, ಲೋಕಸಭಾ ಚುನಾವಣೆಯ ನಂತರ ನಾವು ರಾಜಕೀಯ ಪರಿಸ್ಥಿತಿಯನ್ನು ವಿಶ್ಲೇಷಿಸಿದ್ದೇವೆ ಮತ್ತು ಮುಂಬರುವ ಚುನಾವಣೆಗಳಲ್ಲಿ ರಾಜ್ಯದಲ್ಲಿ ಯಾವುದೇ ಮೈತ್ರಿ ಮಾಡಿಕೊಳ್ಳದೆ ಸ್ಪರ್ಧಿಸಲು ನಿರ್ಧರಿಸಿದ್ದೇವೆ ಎಂದು ಹೇಳಿದರು.ರಾಜ್ಯದಲ್ಲಿನ ಪ್ರಸ್ತುತದ ರಾಜಕೀಯ ಪರಿಸ್ಥಿತಿಗಳ ಬಗ್ಗೆ ವರದಿಯನ್ನು ನೀಡಲು ರಾಜ್ಯ ಘಟಕಕ್ಕೆ ನಿರ್ದೇಶಿಸಲಾಗಿದೆ ಎಂದು ರೈ ಹೇಳಿದರು.ಹರಿಯಾಣ ವಿಧಾನಸಭಾ ಚುನಾವಣೆ 2019ರ ಅಕ್ಟೋಬರ್ನಲ್ಲಿ ನಡೆಯಲಿದೆ.
ಆಪ್ ಮತ್ತು ಜೆಜೆಪಿ ಹರಿಯಾಣದ ಎಲ್ಲಾ 10 ಸ್ಥಾನಗಳಲ್ಲಿ ಒಟ್ಟಾಗಿ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಿದ್ದವು. ಆಪ್ ನಾಲ್ಕು ಸ್ಥಾನಗಳಲ್ಲಿ ಸ್ಪರ್ಧಿಸಿದರೆ, ಉಳಿದ ಆರು ಸ್ಥಾನಗಳಲ್ಲಿ ಜೆಜೆಪಿ ಸ್ಪರ್ಧಿಸಿತ್ತು.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ








