ನಿರ್ಭಯಾ ಕೇಸ್ : ಕ್ಯುರೇಟಿವ್ ಅರ್ಜಿ ಸಲ್ಲಿಸಿದ ಅಪರಾಧಿ ವಿನಯ್ ಶರ್ಮಾ

ನವದೆಹಲಿ:

   ಮರಣದಂಡನೆಗೆ ಸಿದ್ದರಾಗುತ್ತಿರುವ ನಿರ್ಭಯಾ ಅತ್ಯಾಚಾರ ಪ್ರಕರಣದ ಆರೋಪಿಗಳಿಗೆ ತಾವು ಬದುಕಲು ಇರುವ ಕೊನೆಯ ಪ್ರಯತ್ನವೆಂಬಂತೆ ನಿರ್ಭಯಾ ಗ್ಯಾಂಗ್ ರೇಪ್ ಮತ್ತು ಕೊಲೆ ಪ್ರಕರಣದ ನಾಲ್ವರು ಅಪರಾಧಿಗಳಲ್ಲಿ ಒಬ್ಬನಾದ ವಿನಯ್ ಶರ್ಮ ಸುಪ್ರೀಂ ಕೋರ್ಟ್ ನಲ್ಲಿ ಗುರುವಾರ ಕ್ಯುರೇಟಿವ್ ಅರ್ಜಿ ಸಲ್ಲಿಸಿದ್ದಾನೆ.ಜನವರಿ 22ರಂದು ಬೆಳಗ್ಗೆ 7 ಗಂಟೆಗೆ ಗಲ್ಲಿಗೇರಿಸುವಂತೆ ದೆಹಲಿಯ ಪಟಿಯಾಲ ಕೋರ್ಟ್ ಮೊನ್ನೆ ಸೋಮವಾರ ಘೋಷಿಸಿದ ಬಳಿಕ ವಿನಯ್ ಶರ್ಮ ಇಂದು ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾನೆ.

  ತಿಹಾರ್ ಜೈಲಿನಲ್ಲಿ ಜನವರಿ 22ರಂದು ಮುಕೇಶ್ ಸಿಂಗ್, ಪವನ್ ಗುಪ್ತಾ, ವಿನಯ್ ಶರ್ಮ ಮತ್ತು ಅಕ್ಷಯ್ ಕುಮಾರ್ ಸಿಂಗ್ ನನ್ನು ಗಲ್ಲಿಗೇರಿಸಲಾಗುತ್ತದೆ. ನ್ಯಾಯಾಲಯ ಗಲ್ಲು ಶಿಕ್ಷೆ ಪ್ರಕಟಿಸುತ್ತಿದ್ದಂತೆ ನಾಲ್ವರು ಅಪರಾಧಿಗಳು ಭಾವುಕರಾಗಿ ಮಾನಸಿಕವಾಗಿ ಕುಸಿದ ಪ್ರಸಂಗವು ವರದಿಯಾಗಿತ್ತು.2012ರ ಡಿಸೆಂಬರ್ 16ರಂದು 23 ವರ್ಷದ ಯುವತಿ ನಿರ್ಭಯಾ ಮತ್ತು ಆಕೆಯ ಸ್ನೇಹಿತ ದೆಹಲಿಯಲ್ಲಿ ಸಿನಿಮಾ ವೀಕ್ಷಣೆ ಮಾಡಿ ಖಾಸಗಿ ಬಸ್ಸಿನಲ್ಲಿ ಮನೆಗೆ ಹಿಂತಿರುಗಿ ಬರುತ್ತಿದ್ದ ಕೇವಲ 6 ಮಂದಿಯಿದ್ದ ಚಲಿಸುತ್ತಿದ್ದ ಬಸ್ಸಿನಲ್ಲಿ ದುಷ್ಕರ್ಮಿಗಳು ಆಕೆಯ ಮೇಲೆ ಅತ್ಯಾಚಾರವೆಸಗಿ ಕಬ್ಬಿಣದ ರಾಡ್ ನಿಂದ ಹಿಂಸೆ ನೀಡಿ ರಸ್ತೆಯಲ್ಲಿ ಎಸೆದು ಹೋಗಿದ್ದರು.

ಏನಿದು ಕ್ಯುರೇಟಿವ್ ಅರ್ಜಿ..?

  ನ್ಯಾಯಾಲಯದ ಅಂತಿಮ ತೀರ್ಪು ಪ್ರಕಟಗೊಂಡನಂತರದಲ್ಲಿ ಪ್ರಕರಣದ ವಿಚಾರಣೆಯಲ್ಲಿ ಇರಬಹುದಾದ ಕುಂದುಕೊರತೆಗಳ ಪರಿಹಾರಕ್ಕಾಗಿ ಅಪರಾಧಿ/ಅಪರಾಧಿ ಪರ ವಕೀಲರು ಅಂತಿಮ ಕ್ಷಣದಲ್ಲಿ ಬಳಸಬಹುದಾದ ಕೊನೆಯ ಅಸ್ತ್ರ ಕ್ಯುರೇಟಿವ್ ಅರ್ಜಿಯಾಗಿದೆ , ಇದನ್ನು ಸಾಮಾನ್ಯವಾಗಿ ನ್ಯಾಯಾಧೀಶರು ಚೇಂಬರ್‌ನಲ್ಲಿ ನಿರ್ಧರಿಸುತ್ತಾರೆ ತೀರಾ ಅಪರೂಪದ ಸಂದರ್ಭಗಳಲ್ಲಿ ಅರ್ಜಿಗಳನ್ನು  ಮುಕ್ತ ನ್ಯಾಯಾಲಯದ ವಿಚಾರಣೆ ಮಾಡಲಾಗುತ್ತದೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link