ಕಂಪನಿ ಮುಚ್ಚುವಿಕೆ ಬರಿ ವದಂತಿ :ವೊಡಾಫೋನ್ ಸ್ಪಷ್ಟನೆ..!

ನವದೆಹಲಿ:

   ಭಾರತದ ಪ್ರಸಿದ್ಧ  ಟೆಲಿಕಾಂ ಸಂಸ್ಥೆಗಳಲ್ಲಿ ಒಂದಾಗಿರುವ ವೊಡಾಫೋನ್ ಸಂಸ್ಥೆ ಭಾರತದಲ್ಲಿ ತನ್ನ ಉದ್ಯಮವನ್ನು ಸ್ಥಗಿತಗೊಳಿಸಲು ಮುಂದಾಗಿದೆ ಎಂಬ ಬಗ್ಗೆ ವರದಿಗಳಿಗೆ ಸ್ಪಷ್ಟನೆ ನೀಡಿದ ವೊಡಾಫೋನ್ .

   ಸಂದರ್ಶನವೊಂದರಲ್ಲಿ ಈ ಪ್ರಶ್ನೆಗೆ ಉತ್ತರಿಸಿದ ಸಂಸ್ಥೆಯ ಸಿಇಓ ಭಾರತದ ವಹಿವಾಟುಗಳನ್ನು ಅಂತ್ಯಗೊಳಿಸುವ ವಿಚಾರ ಕೇವಲ ಊಹಾಪೋಹ ಎಂದು ಹೇಳಿದ್ದಾರೆ.ಸದ್ಯ ಭಾರತದಲ್ಲಿ ವೊಡಾಫೋನ್ ಮತ್ತು ಐಡಿಯಾ ಜಂಟಿಯಾಗಿ ಕಾರ್ಯಚರಣೆ ಮಾಡುತ್ತಿವೆ ಅದರಲ್ಲೂ ನಷ್ಟ ಎದುರಿಸುತ್ತಿವೆ ಇದಕ್ಕೆ ಕೊಡುಗೆಯಾಗಿ ಪ್ರತಿ ವರ್ಷ ಲಕ್ಷಾಂತರ ಗ್ರಾಹಕರನ್ನು ಕಳೆದುಕೊಳ್ಳುತ್ತಿವೆ ಈ ಹಿನ್ನೆಲೆಯಲ್ಲಿ ವೊಡಾಫೋನ್ ಭಾರತದಲ್ಲಿನ ತನ್ನ ಉದ್ಯಮವನ್ನು ತೊರೆಯಲು ನಿರ್ಧರಿಸಿದೆ ಎಂಬ ವದಂತಿ ಹಬ್ಬಿತ್ತು ಎನ್ನಲಾಗಿದೆ. ಆದರೆ ಈ ಬಗ್ಗೆ ಸ್ಪಷ್ಟನೆ ನೀಡಿರುವ ವೊಡಾಫೋನ್-ಐಡಿಯಾ ಸಂಸ್ಥೆ ಎಲ್ಲಾ ವದಂತಿಗಳನ್ನೂ ನಿರಾಕರಿಸಿದೆ. 

   ವೊಡಾಫೋನ್-ಐಡಿಯಾ ಸಂಸ್ಥೆ ತನಗೆ ಸಾಲ ನೀಡಿರುವ ಸಂಸ್ಥೆಗೆ ಸಾಲದ ಬಾಧ್ಯತೆಗಳನ್ನು ಮರುಹಂಚಿಕೆ ಮಾಡಬೇಕೆಂದು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ವೋಡಾಫೋನ್ ಭಾರತ ತೊರೆಯಲು ಮುಂದಾಗಿದೆ ಎಂಬ ವದಂತಿ ಹಬ್ಬಿತ್ತು. 

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap