ಜಾರ್ಖಂಡ್ : 11 ಗಂಟೆಯವರೆಗು ಶೇ.27.4% ಮತದಾನ

ರಾಂಚಿ:

       ಜಾರ್ಖಂಡ್ ರಾಜ್ಯದ ವಿಧಾನಸಭೆ ಚುನಾವಣೆಯ ಭಾಗವಾಗಿ ಇಂದು 13 ವಿಧಾನಸಭಾ ಕ್ಷೇತ್ರಗಳ ಮೊದಲ ಹಂತದ ಮತದಾನ ಪ್ರಾರಂಭವಾಗಿದೆ ಬೆಳಿಗ್ಗೆ 7 ರಿಂದ 11ರ ವರೆಗೂ ಶೇ.27.4ರಷ್ಟು ಮತದಾನವಾಗಿದೆ ಎಂದು ತಿಳಿದು ಬಂದಿದೆ. 

      ಚತ್ರ, ಗುಮ್ಲಾ, ಬಿಶುನ್‌ಪುರ, ಲೋಹರ್‌ದಾಗ, ಮಾನಿಕಾ, ಲತೇಹರ್, ಪಂಕಿ, ಡಾಲ್ಟೋಂಗಂಜ್, ಬಿಶ್ರಾಂಪುರ, ಚತ್ತಾರ್‌ಪುರ, ಹುಸೇನಾಬಾದ್, ಗರ್ಹ್ವಾ ಮತ್ತು ಭಾವನಾಥಪುರ ವಿಧಾನಸಭಾ ಚುನಾವಣೆ ನಡೆಯುತ್ತಿದ್ದು, ಬೆಳಗ್ಗೆ  7 ಗಂಟೆಯಿಂದ ಮಧ್ಯಾಹ್ನ 3 ಗಂಟೆಯ ವರೆಗೂ ಮತದಾನ ನಡೆಯಲಿದ್ದು, ಮತದಾನ ಕೇಂದ್ರಗಳ ಸುತ್ತಾ ಸೂಕ್ತ ಭದ್ರತಾ ವ್ಯವಸ್ಥೆ ಕಲ್ಪಿಸಲಾಗಿದೆ. 

     ಇಂದಿನ ಮತದಾನದಲ್ಲಿ ಒಟ್ಟು 37,83,055 ಮಂದಿ ಮತದಾರರು ತಮ್ಮ ಹಕ್ಕು ಚಲಾಯಿಸುತ್ತಿದ್ದು, ಈ ಪೈಕಿ 18,01,356 ಮಹಿಳಾ ಮತದಾರರೂ ಸೇರಿದ್ದಾರೆ. ಒಟ್ಟು 13 ಕ್ಷೇತ್ರಗಳಲ್ಲಿ 189 ಮಂದಿ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗೆ ನಿಂತಿದ್ದು, ಈ ಪೈಕಿ 15 ಮಂದಿ ಮಹಿಳಾ ಅಭ್ಯರ್ಥಿಗಳೂ ಕಣದಲ್ಲಿದ್ದಾರೆ. 
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link
Powered by Social Snap