ನವದೆಹಲಿ:
ಪ್ರಸಕ್ತ ಲೋಕಸಭಾ ಚುನಾವಣಾ ಫಲಿತಾಂಶ ಪ್ರಕಟಿಸುವ ಮುನ್ನ ಎಲ್ಲಾ ಕ್ಷೇತ್ರಗಳ ವಿದ್ಯುನ್ಮಾನ ಮತಯಂತ್ರಗಳ ಶೇ.ಅರ್ಧದಷ್ಟು ವಿಪಿಪ್ಯಾಟ್ ಗಳ ಚೀಟಿಗಳನ್ನು ಎಣಿಕೆ ಮಾಡುವಂತೆ ವಿಪಕ್ಷಗಳು ಕೋರಿಕೆಗೆ ಸಂಬಂಧಿಸಿದಂತೆ ಪ್ರತಿಕ್ರಿಯೆ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ಇಂದು ಚುನಾವಣಾ ಆಯೋಗಕ್ಕೆ ನೊಟೀಸ್ ಜಾರಿ ಮಾಡಿದೆ.
ನ್ಯಾಯಮೂರ್ತಿ ರಂಜನ್ ಗೊಗೊಯ್ ಮತ್ತು ಜಸ್ಟಿಸ್ ದೀಪಕ್ ಗುಪ್ತಾ ಹಾಗೂ ಜಸ್ಟಿಸ್ ಸಂಜೀವ್ ಖನ್ನಾ ಅವರನ್ನು ಒಳಗೊಂಡ ತ್ರಿಸದಸ್ಯ ಪೀಠವು ವಿರೋಧ ಪಕ್ಷಗಳ ಮನವಿಯನ್ನು ಮಾರ್ಚ್ 25ಕ್ಕೆ ನಿಗದಿ ಪಡಿಸಿ ಆದೇಶ ಹೊರಡಿಸಿದೆ. ಈ ವಿಷಯದಲ್ಲಿ ಕೋರ್ಟಿಗೆ ನೆರವಾಗುವುದಕ್ಕಾಗಿ ಓರ್ವ ಅಧಿಕಾರಿಯನ್ನು ಕಳುಹಿಸುವಂತೆ ಚುನಾವಣಾ ಆಯೋಗಕ್ಕೆ ಸೂಚನೆ ನೀಡಿದೆ.
ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ