ನಮಗೆ ಕಾಂಗ್ರೆಸ್ ಅವಶ್ಯಕತೆ ಇಲ್ಲಾ : ಮಾಯಾವತಿ

ಲಕ್ನೋ:

     ಮುಂಬರುವ ಚುನಾವಣೆಯಲ್ಲಿ ಬಿಜೆಪಿಯನ್ನು ಮಣಿಸಲು ಎಸ್‍ಪಿ-ಬಿಎಸ್‍ಪಿ ಮೈತ್ರಿ ಸಾಕು ಕಾಂಗ್ರೆಸ್ ಪಕ್ಷದ ಅವಶ್ಯಕತೆ ನಮಗಿಲ್ಲ ಎಂದು ಹೇಳುವ ಮೂಲಕ ಮಾಯಾವತಿ ಕೈ ನಾಯಕರಿಗೆ ದೊಡ್ಡ ಶಾಕ್ ನೀಡಿದ್ದಾರೆ.

     7 ಕ್ಷೇತ್ರಗಳನ್ನು ಹೊರತುಪಡಿಸಿ ಎಲ್ಲ ಕಡೆಯೂ ಸ್ಪರ್ಧೆ ಮಾಡಲಿದ್ದೇವೆ ಎಂದು ಕಾಂಗ್ರೆಸ್ ಭಾನುವಾರ ತಿಳಿಸಿದೆ,  ಸಮಾಜವಾದಿ ಪಾರ್ಟಿ, ಬಹುಜನ ಸಮಾಜವಾದಿ ಪಾರ್ಟಿ ಮತ್ತು ರಾಷ್ಟ್ರೀಯ ಲೋಕ್ ದಳ ಪಕ್ಷಗಳ ಮುಖಂಡರು ಸ್ಪರ್ಧಿಸುವ ಕ್ಷೇತ್ರಗಳಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಕಣಕ್ಕಿಳಿಸದಿರಲು ನಿರ್ಧರಿಸಿದೆ ಎಂದು ತಿಳಿಸಿದೆ.

       ಕಾಂಗ್ರೆಸ್ ನ ನಿರ್ಧಾರದ ಕುರಿತು ಪ್ರತಿಕ್ರಿಯಿಸಿದ ಮಾಯಾವತಿ, ಉತ್ತರ ಪ್ರದೇಶದ 80 ಕ್ಷೇತ್ರಗಳಲ್ಲಿಯೂ ಸ್ಪರ್ಧಿಸಲು ಕಾಂಗ್ರೆಸ್ ಗೆ ಮುಕ್ತ ಅವಕಾಶವಿದೆ  ನಮ್ಮ ಮೈತ್ರಿಯೊಂದೇ ಸಾಕು ಬಿಜೆಪಿಯನ್ನು ಸೋಲಿಸಲು ಕಾಂಗ್ರೆಸ್ ಅವಶ್ಯಕತೆ ನಮಗಿಲ್ಲ. 7 ಕ್ಷೇತ್ರಗಳಲ್ಲಿ ಕಾಂಗ್ರೆಸ್ ಸ್ಪರ್ಧಿಸದಂತೆ ನಾವು ಯಾವುದೇ ರೀತಿಯಲ್ಲಿ ಒತ್ತಡ ಹಾಕಿಲ್ಲ ಮುಂದೆ ಹಾಕುವುದೂ ಇಲ್ಲಾ. ಈ ಕುರಿತು ಹರಡುತ್ತಿರುವ ಸುದ್ದಿಗಳು ಸುಳ್ಳು. ಇಡೀ ದೇಶದ ಯಾವುದೇ ರಾಜ್ಯದಲ್ಲೂ ನಾವು ಕಾಂಗ್ರೆಸ್ ಜೊತೆ ಮೈತ್ರಿ ಮಾಡಿಕೊಳ್ಳಲು ಮುಂದಾಗುವುದಿಲ್ಲ ಎಂದು ಮಾಯಾವತಿ ಟ್ವೀಟ್ ಮೂಲಕ ಖಚಿತಪಡಿಸಿದ್ದಾರೆ.

 ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook pageಲೈಕ್ ಮಾಡಿ  

Recent Articles

spot_img

Related Stories

Share via
Copy link