ಎರಡೂ ಗಡಿಯಿಂದ ಹಿಂದೆ ಸರಿದಿದ್ದೇವೆ : ಚೀನಾ

ಬೀಜಿಂಗ್:

    ಲಡಾಖ್ ಗಡಿಯ ಬಹುತೇಕ ನೆಲೆಗಳಿಂದ ಭಾರತ ಮತ್ತು ಚೀನಾ ಎರಡೂ ದೇಶಗಳ ಸೇನಾಪಡೆಗಳು ಸಂಪೂರ್ಣ ಹಿಂದೆ ಸರಿದಿವೆ ಎಂದು ಚೀನಾದ ಹಿರಿಯ ಅಧಿಕಾರಿಯೊಬ್ಬರು ಮಂಗಳವಾರ ಹೇಳಿದ್ದಾರೆ. ಅಲ್ಲದೆ ಗಡಿಯಲ್ಲಿ ಪರಿಸ್ಥಿತಿ ಸಹಜ ಸ್ಥಿತಿಗೆ ಮರಳುತ್ತಿದೆ ಎಂದು ಹೇಳಿದ್ದಾರೆ.

    ಗಾಲ್ವಾನ್, ಗೊಗ್ರಾ ಮತ್ತು ಹಾಟ್ ಸ್ಪ್ರಿಂಗ್ ನಿಂದ ಸೇನೆ ಹಿಂಪಡೆಯಲಾಗಿದೆಯೇ? ಎಂಬ ವರದಿಗಾರರ ಪ್ರಶ್ನೆಯೊಂದಕ್ಕೆ ಉತ್ತರಿಸಿದ ಚೀನಾ ವಿದೇಶಾಂಗ ಸಚಿವಾಲಯದ ವಕ್ತಾರ ವಾಂಗ್ ವೆನ್ಬಿನ್, ಉಭಯ ದೇಶಗಳ ಮುಂಚೂಣಿ ಗಡಿ ಪಡೆಗಳು ಈಗಾಗಲೇ ಬಹುತೇಕ ಸೇನಾ ನೆಲೆಗಳಲ್ಲಿ ನಿಷ್ಕ್ರಿಯತೆಯನ್ನು ಪೂರ್ಣಗೊಳಿಸಿವೆ ಎಂದು ತಿಳಿಸಿದ್ದಾರೆ.

    ಇತ್ತೀಚಿಗೆ ಭಾರತೀಯ ಸೇನೆ ಜೊತೆ ನಡೆದ ಮಾತುಕತೆಯಲ್ಲಿ ನಿರ್ಣಯಿಸಿದಂತೆ ಲಡಾಖ್ ಗಡಿಯಲ್ಲಿರುವ ಮುಂಚೂಣಿ ಸೇನಾ ನೆಲೆಗಳಿಂದ ಸೈನಿಕರನ್ನು ಹಿಂಪಡೆಯಲಾಗಿದೆ. ಗಡಿಯಲ್ಲಿನ ಉದ್ವಿಗ್ನತೆ ಕಡಿಮೆ ಮಾಡಲು ಉಭಯ ಸೇನೆಗಳು ಪರಸ್ಪರ ಸಹಕರಿಸುತ್ತಿವೆ ಎಂದು ವಾಂಗ್ ಹೇಳಿದ್ದಾರೆ.ಶಾಂತಿ ಮಾತುಕತೆಗಳ ಮೂಲಕವೇ ಸಮಸ್ಯೆ ಪರಿಹಾರ ಕಾಣಬೇಕು ಎಂಬುದು ಎರಡೂ ರಾಷ್ಟ್ರಗಳ ಬಯಕೆಯಾಗಿದ್ದು, ಅದರಂತೆಯೇ ಉಭಯ ಸೇನೆಗಳು ಮಾತುಕತೆಯಲ್ಲಿ ನಿರತವಾಗಿರುವುದು ಸಂತಸದ ವಿಷಯ ಎಂದು ವೆನ್‌ಬಿನ್ ನುಡಿದಿದ್ದಾರೆ.ಲಡಾಖ್ ಗಡಿಯಿಂದ ಬಹುತೇಕವಾಗಿ ಸೈನ್ಯ ತುಕಡಿಗಳನ್ನು ಹಿಂಪಡೆಯಲಾಗಿದೆ ಎಂಬ ಚೀನಾದ ಘೋಷಣೆಯನ್ನು ತಳ್ಳಿಹಾಕಿರುವ ಭಾರತ, ಈ ಹೇಳಿಕೆ ಸರಿಯಲ್ಲ ಎಂದು ಕೇಂದ್ರ ಸರ್ಕಾರದ ಮೂಲಗಳು ತಿಳಿಸಿವೆ.

ಪ್ರಜಾಪ್ರಗತಿಯಿಂದ ತಾಜಾ ಸುದ್ದಿಗಾಗಿ ಪ್ರಜಾಪ್ರಗತಿ facebook page ಲೈಕ್ ಮಾಡಿ

Recent Articles

spot_img

Related Stories

Share via
Copy link